ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ರಾಜ್ಯದ 10 ಸ್ಥಳಗಳಲ್ಲಿ ನಾಲ್ವರು ಸರ್ಕಾರಿ ಅಧಿಕಾರಿಗಳ ಮನೆ , ಕಚೇರಿಗಳ ಮೇಲೆ ಏಕ ಕಾಲಕ್ಕೆ ದಾಳಿ

ಬೆಂಗಳೂರು, ಏ.27- ಬೆಳ್ಳಂ ಬೆಳಗ್ಗೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ರಾಜ್ಯದ 10 ಸ್ಥಳಗಳಲ್ಲಿ ನಾಲ್ವರು ಸರ್ಕಾರಿ ಅಧಿಕಾರಿಗಳ ಮನೆ , ಕಚೇರಿಗಳ ಮೇಲೆ ಏಕ ಕಾಲಕ್ಕೆ ದಾಳಿ ನಡೆಸಿ ಅಕ್ರಮ ಸಂಪಾದ£ಯನ್ನು ಪತ್ತೆ ಹಚ್ಚಿದ್ದಾರೆ.

ಚಿತ್ರದುರ್ಗ, ಬಾಗಲಕೋಟೆ, ಕೋಲಾರ, ರಾಮನಗರ ಸೇರಿದಂತೆ 10 ಕಡೆ ಏಕ ಕಾಲಕ್ಕೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಚಿತ್ರದುರ್ಗ ತಾಲ್ಲೂಕು ಪಂಚಾಯ್ತಿ ಕಾರ್ಯ ನಿರ್ವಹಣಾಧಿಕಾರಿ ಲಕ್ಷ್ಮೀಪತಿ ಅವರ ಕಮನಬಾವಿ ಬಡಾವuಯಲ್ಲಿರುವ ಮನೆ ಹಾಗೂ ಚಳ್ಳಕೆರೆ ತಾಲ್ಲೂಕಿನ ಮನಮೈನ ಹಟ್ಟಿ ಗ್ರಾಮದಲ್ಲಿರುವ ಮನೆ ಹಾಗೂ ಪಟ್ಟಣದಲ್ಲಿರುವ ಕಚೇರಿಯಲ್ಲಿ ಎಸಿಬಿ ಡಿವೈಎಸ್ಪಿ ಮಂಜುನಾಥ್ ನೇತೃತ್ವದಲ್ಲಿ ಅಧಿಕಾರಿಗಳು ತಪಾಸಣೆ ಕಾರ್ಯ ಕೈಗೊಂಡಿದ್ದು , ಹಲವೆಡೆ ಇರುವ ನಿವೇಶನ , ಕೃಷಿ ಜಮೀನು ಹಾಗೂ ವಿವಿಧ ಬ್ಯಾಂಕ್‍ಗಳಲ್ಲಿ ಇಟ್ಟಿದ್ದ ಠೇವಣಿ, ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬಾಗಲಕೋmಯಲ್ಲಿ ಕಂದಾಯ ನಿರೀಕ್ಷಕ ಸಂಗಪ್ಪ ಐ ಸೂದಿ ಅವರ ಮಹಾಲಂಗಿಪುರ ದಲ್ಲಿರುವ ಮನೆ ಹಾಗೂ ಮುಧೋಳದಲ್ಲಿರುವ ಅವರ ಕಚೇರಿಯಲ್ಲಿ ಕಡತಗಳನ್ನು ಪರಿಶೀಲಿಸಲಾಗಿದೆ.

ಎಸ್ಪಿ ಅಮರನಾಥ ರೆಡ್ಡಿ ಹಾಗೂ ಡಿವೈಎಸ್ಪಿ ಮಲ್ಲೇಶ ಮಹಾಮನಿ ಅವರ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು , ಹಲವು ಚರಾಚರ ಆಸ್ತಿಗಳ ದಾಖಲೆಗಳು ಪತ್ತೆಯಾಗಿದೆ.

ಕೋಲಾರದ ಶ್ರೀನಿವಾಸಪುರ ತಾಲ್ಲೂಕಿನ ಜಿಲ್ಲಾಧಿಕಾರಿ ಕಚೇರಿಯ ಕಂದಾಯ ವಿಭಾಗದ ಶಿರಸ್ತೇದಾರ ಮುನಿ ವೆಂಕಟಪ್ಪ ಅವರು ಅಕ್ರಮ ಆಸ್ತಿ ಗಳಿಕೆ ಹಾಗೂ ಆದಾಯಕ್ಕೆ ಮೀರಿ ಆಸ್ತಿ ಗಳಿಕೆ ದೂರುಗಳು ಬಂದ ಹಿನ್ನೆ¯ಯಲ್ಲಿ ಇಂದು ಬೆಳಗ್ಗೆ ಎಸಿಬಿ ದಾಳಿ ನಡೆಸಿದೆ.

ಮುಳಬಾಗಿಲಿನಲ್ಲಿನ ಮುತ್ಯಾಲಪೇmಯಲ್ಲಿರುವ ಮನೆ, ಪಲ್ಲ ಶೆಟ್ಟಿ ಹಳ್ಳಿಯಲ್ಲಿರುವ ಫಾರಂ ಹೌಸ್ ಹಾಗೂ ಕಚೇರಿಯ ಮೇಲೆ ಇಂದು ಬೆಳಗ್ಗೆ 6 ಗಂmಯಲ್ಲಿ ಏಕ ಕಾಲದಲ್ಲಿ ದಾಳಿ ನಡೆದಿದ್ದು , ಇಲ್ಲಿ ಭಾರೀ ಪ್ರಮಾಣದ ಚಿನ್ನಾಭರಣ ಹಾಗೂ ಬೆಂಗಳೂರು ಸೇರಿದಂತೆ ಇತರೆಡೆ ಇರುವ ನಿವೇಶನಗಳ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ಹೇಳಲಾಗುತ್ತಿದೆ.

ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕು ಸೋಲೂರಿನ ಕಮ್ಯುನಿಟಿ ಹೆಲ್ತ್ ಸೆಂಟರ್‍ನಲ್ಲಿ ಸೆಕ್ಷನ್ ಸೂಪರಿಟೆಂಡೆಂಟ್ ಆಗಿರುವ ಗಣೇಶ್ ಮೂರ್ತಿ ಅವರ ಕುದೂರಿನಲ್ಲಿರುವ ಮನೆ ಮತ್ತು ಕರ್ತವ್ಯ ನಿರ್ವಹಿಸುತ್ತಿರುವ ಕಚೇರಿಗಳ ಮೇಲೆ ದಾಳಿ ನಡೆಸಿ ಸಂಪಾದನೆಗಿಂತ ಹೆಚ್ಚು ಆಸ್ತಿ ಹೊಂದಿರುವುದನ್ನು ಪತ್ತೆ ಹಚ್ಚಲಾಗಿದೆ.
ಡಿವೈಎಸ್ಪಿಗಳಾದ ಮೋಹನ್, ಕೋದಂಡರಾಮಯ್ಯ ಮತ್ತು ಪ್ರಸಾದ್ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ