ಮಂಗಳೂರು:ಏ-27: ರಾಜ್ಯ ವಿಧಾನಸಭಾ ಚುನಾವಣಾ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಮತದಾರರನ್ನು ಸೆಳೆಯಲು ಇಂದು ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆಮಾಡಿದೆ.
ಮಂಗಳೂರುನ ಟಿಎಂಎಪೈ ಹಾಲ್‌ನಲ್ಲಿ ಚುನಾವಣಾ ಪ್ರಣಾಳಿಕೆ ಪ್ರತಿಯನ್ನು ಪಕ್ಷದ ಹಿರಿಯ ನಾಯಕ ಜನಾರ್ದನ ಪೂಜಾರಿ ಅವರಿಗೆ ನೀಡುವ ಮೂಲಕ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಣಾಳಿಕೆ ಬಿಡುಗಡೆ ಮಾಡಿದರು.
ಕೃಷಿ, ಶಿಕ್ಷಣ ಕ್ರೀಡೆ, ಸಾಮಾಜಿಕ ನ್ಯಾಯ, ಇಂಧನ ಸೇರಿದಂತೆ 16 ಕ್ಷೇತ್ರಗಳನ್ನು ಉಲ್ಲೇಖಿಸಿ ಪ್ರಣಾಳಿಕೆ ಸಿದ್ಧಪಡಿಸಲಾಗಿದೆ.
ಕಲಬುರ್ಗಿ ವಿಭಾಗ, ಬೆಂಗಳೂರು, ಬೆಳಗಾವಿ, ಮೈಸೂರು ನಾಲ್ಕು ವಿಭಾಗಗಳನ್ನಾಗಿ ಮಾಡಿ ಆಯಾ ವಿಭಾಗದಲ್ಲಿ ಕೈಗೊಳ್ಳಲಾಗುವ ಅಭಿವೃದ್ಧಿ ಮತ್ತು ಜನಪರ ಕಾರ್ಯಕ್ರಮ, ಉದ್ಯೋಗ ಸೃಷ್ಟಿ ಸೇರಿದಂತೆ ಹಲವು ಅಂಶಗಳ ಭರವಸೆಯನ್ನು ಪ್ರಣಾಳಿಕೆಯಲ್ಲಿ ನೀಡಲಾಗಿದೆ.
ಬಿಡುಗಡೆ ಬಳಿಕ ಮಾತನಾಡಿದ ರಾಹುಲ್, ಇದು ಕೇವಲ ಪ್ರಣಾಳಿಕ ಅಲ್ಲ. ಕರ್ನಾಟಕ ಜನತೆಯ ಧ್ವನಿ ಎಂದು ಬಣ್ಣಿಸಿದ್ದಾರೆ ಕಳೆದ ಬಾರಿ ನಾವು ನೀಡಿದ ಭರವಸೆಗಳಲ್ಲಿ ಶೇ.95 ರಷ್ಟು ಈಡೇರಿಸಿದ್ದೇವೆ. ನುಡಿದಂತೆ ನಡೆದಿದ್ದೇವೆ ಎಂದುರು.
ಇದೇ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮುಂದಿನ ಐದು ವರ್ಷಗಳಲ್ಲಿ ರಾಜ್ಯವನ್ನು ಸರ್ವಾಂಗೀಣ ಅಭಿವೃದ್ಧಿ ಮಾಡುವುದೇ ಕಾಂಗ್ರೆಸ್ ಗುರಿ ಎಂದರು. ಕಳೆದ ಬಾರಿ ಕೊಟ್ಟ ಎಲ್ಲ ಭರವಸೆಗಳನ್ನು ಈಡೇಸಿದ್ದು ನಮ್ಮ ಸರ್ಕಾರದ ಹೆಮ್ಮೆ ಎಂದು ಸಿಎಂ ತಿಳಿಸಿದ್ದಾರೆ.
ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ, ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಪ್ರಣಾಳಿಕೆ ಸಮಿತಿ ಅಧ್ಯಕ್ಷ ಎಂ.ವೀರಪ್ಪ ಮೊಯಿಲಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ವೇಣುಗೋಪಾಲ್, ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್, ಎಐಸಿಸಿ ಕಾರ್ಯದರ್ಶಿ ಪಿ.ಸಿ.ವಿಷ್ಣುನಾದನ್, ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇದ್ದರು.
Karnataka assembly election,Congress releases, election manifesto