ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಕಳೆದ 24 ಗಂಟೆಗಳಲ್ಲಿ 162 ಪ್ರಕರಣ:

ಬೆಂಗಳೂರು, ಏ.27-ರಾಜ್ಯ ವಿಧಾನಸಭೆ ಚುನಾವಣೆ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಕಳೆದ 24 ಗಂಟೆಗಳಲ್ಲಿ 162 ಪ್ರಕರಣಗಳನ್ನು ದಾಖಲಿಸಿದ್ದು, 855 ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿದೆ.
ಅಲ್ಲದೆ, ಅಕ್ರಮವಾಗಿ ಸಾಗಿಸುತ್ತಿದ್ದ 33.46 ಲಕ್ಷ ನಗದು 10 ಕೆ.ಜಿ ಬೆಳ್ಳಿ ಗೆಜ್ಜೆಗಳು, 1091 ಸೀರೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಸ್ಟಾಟಿಕ್ ಸರ್ವೆಲೆನ್ಸ್ ತಂಡಗಳು 9.46 ಲಕ್ಷ ರೂ. ನಗರದು, 4.5 ಲಕ್ಷ ರೂ. ಮೌಲ್ಯದ 10 ಕೆ.ಜಿ ಬೆಳ್ಳಿ, 392 ಸೀರೆ ಮತ್ತಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಫ್ಲೈಯಿಂಗ್ ಸ್ಕ್ವಾಡ್‍ಗಳು 24 ಲಕ್ಷ ನಗದು, 2.20 ಲಕ್ಷ ಮೌಲ್ಯದ ಒಂದು ವಾಹನ, 11 ಬಂಡಲ್ ಸೀರೆ ವಶಪಡಿಸಿಕೊಂಡಿವೆ.
ಇದುವರೆಗ ಫ್ಲೈಯಿಂಗ್ ಸ್ಕ್ವಾಡ್‍ಗಳು, ಸ್ಟಾಟಿಕ್ ಸರ್ವೆಲೆನ್ಸ್ ತಂಡಗಳು, ಪೆÇಲೀಸ್ ಪ್ರಾಧಿಕಾರಗಳು 40.81 ಕೋಟಿ ನಗದು ವಶಪಡಿಸಿಕೊಂಡಿವೆ. ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ನಿನ್ನೆಯಿಂದಿಚೇಗೆ 18 ಪ್ರಕರಣಗಳಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ. ಅಬಕಾರಿ ಇಲಾSಯು ನಿನ್ನೆಯಿಂದಿಚೇಗೆ 11.936 ಲೀಟರ್ ಮದ್ಯವನ್ನು ವಶಪಡಿಸಿಕೊಂಡು 69 ಪಕ್ರರಣಗಳನ್ನು ದಾಖಲಿಸಿದೆ. ಇದರ ಮೌಲ್ಯ 66.98 ಲಕ್ಷ ರೂ. ಆಗಲಿದೆ ಎಂದು ಅಂದಾಜಿಸಲಾಗಿದೆ. ಸಿಆರ್‍ಪಿಸಿ ಕಾಯ್ದೆಯಡಿ 421 ವ್ಯಕ್ತಿಗಳಿಂದ ಮುಚ್ಚಳಿಕೆ ಪಡೆದು 855 ಜಾಮೀನುರಹಿತ ವಾರೆಂಟ್‍ಗಳನ್ನು ಹೊರಡಿಸಲಾಗಿದೆ.
162 ಪಕ್ರರಣಗಳನ್ನು ದಾಖಲಿಸಿದ್ದು, 897 ನಾಕಾಬಂಧಿಗಳನ್ನು ನಿರ್ಮಿಸಿ ಕಾರ್ಯನಿರ್ವಹಿಸಿಲಾಗುತ್ತಿದೆ ಎಂದು ಅಧಿಕೃತ ಪ್ರಕಟuಯಲ್ಲಿ ತಿಳಿಸಿದೆ

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ