ಭಿತ್ತಿಪತ್ರ ಹಾಗೂ ಜಾಹಿರಾತು ಫಲಕ ಅಳವಡಿಕೆಗೆ ಅನುಮತಿ ನೀಡುವ ಕುರಿತು ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ

ಬೆಂಗಳೂರು,ಏ.27- ರಾಜಕೀಯ ಪಕ್ಷಗಳ ಚುನಾವಣಾ ಪ್ರಚಾರದ ಭಿತ್ತಿಪತ್ರ ಹಾಗೂ ಜಾಹಿರಾತು ಫಲಕ ಅಳವಡಿಕೆಗೆ ಅನುಮತಿ ನೀಡುವ ಕುರಿತಂತೆ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರು ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸಮಿತಿಯೊಂದನ್ನು ರಚನೆ ಮಾಡಿದ್ದಾರೆ.

ಕಾನೂನು ಇಲಾSಯ ಕಾರ್ಯದರ್ಶಿ, ಬೆಂಗಳೂರು ನಗರ ಪೆÇಲೀಸ್ ಆಯುಕ್ತ ಸುನೀಲ್‍ಕುಮಾರ್, ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಅವರು ಈ ಸಮಿತಿಯ ಸದಸ್ಯರಾಗಿರುತ್ತಾರೆ.

ರಾಜ್ಯ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ವಿವಿಧ ರಾಜಕೀಯ ಪಕ್ಷಗಳು ಜಾಹಿರಾತು ಫಲಕ ಅಳವಡಿಸಲು ಅನುಮತಿ ನೀಡುವಂತೆ ಮನವಿ ಮಾಡಿಕೊಂಡಿರುವ ಹಿನ್ನೆ¯ಯಲ್ಲಿ ಈ ಸಮಿತಿ ರಚನೆ ಮಾಡಲಾಗಿದೆ.

ಸಮಿತಿಯ ಸದಸ್ಯರು ಕಾಲಕಾಲಕ್ಕೆ ಸಭೆ ನಡೆಸಿ ಚುನಾವಣಾ ಜಾಹಿರಾತು ಫಲಕ ಅಳವಡಿಸಲು ಅನುಮತಿ ನೀಡಬೇಕು. ಸಮಿತಿ ಸದಸ್ಯರು ಯಾವುದೇ ಒಂದು ಪಕ್ಷದ ಪರ ಒಲವು ತೋರದೆ ಎಲ್ಲ ರಾಜಕೀಯ ಪಕ್ಷಗಳ ಅಭ್ಯರ್ಥಿಗಳಿಗೂ ಜಾಹಿರಾತು ಫಲಕ ಮತ್ತು ಭಿತ್ತಿಪತ್ರ ಅಳವಡಿಸಲು ಅನುಮತಿ ನೀಡುವ ಮೂಲಕ ನ್ಯಾಯಬದ್ಧವಾಗಿ ಕರ್ತವ್ಯ ನಿರ್ವಹಿಸುವಂತೆ ಸಂಜೀವ್‍ಕುಮಾರ್ ಅವರು ಸಲಹೆ ನೀಡಿದ್ದಾರೆ.

ಯಾವುದೇ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಜಾಹಿರಾತು ಫಲಕ ಅಳವಡಿಸಲು ಅನುಮತಿ ಪಡೆದುಕೊಂಡರೆ ಅವರು ಜಾಹಿರಾತು ಪ್ರದರ್ಶನಕ್ಕೆ ಪಾವತಿಸುವ ಶುಲ್ಕವನ್ನು ಅವರ ಚುನಾವಣಾ ವೆಚ್ಚಕ್ಕೆ ಸರಿದೂಗಿಸಬೇಕು ಎಂದು ಸಂಜೀವ್ ಸೂಚನೆ ನೀಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ