ಹದ್ದಿನ ಕಣ್ಣಿಟ್ಟು ತಪಾಸಣೆ ನಡೆಸಿರುವ ಚುನಾವಣಾಧಿಕಾರಿಗಳು: 58 ಕೆ.ಜಿ. ಚಿನ್ನವನ್ನು ಪತ್ತೆ

ಬೆಂಗಳೂರು, ಏ.27- ವಿಧಾನಸಭಾ ಚುನಾವಣೆ ಹಿನ್ನೆಯಲ್ಲಿ ಚೆಕ್‍ಪೆÇೀಸ್ಟ್‍ಗಳಲ್ಲಿ ಭಾರೀ ಹದ್ದಿನ ಕಣ್ಣಿಟ್ಟು ತಪಾಸಣೆ ನಡೆಸಿರುವ ಚುನಾವಣಾಧಿಕಾರಿಗಳು ಹಾಗೂ ಪೆÇಲೀಸರು ಇಂದು ಮಧ್ಯಾಹ್ನ 58 ಕೆ.ಜಿ. ಚಿನ್ನವನ್ನು ಪತ್ತೆ ಹಚ್ಚಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಚನ್ನರಾಯಪಟ್ಟಣ ಪೆÇಲೀಸ್ ಠಾಣಾ ವ್ಯಾಪ್ತಿಗೆ ಬರುವ ಬಾಲೇಪುರ ಚುನಾವಣಾ ಚೆಕ್‍ಪೆÇೀಸ್ಟ್‍ನಲ್ಲಿ ಅಧಿಕಾರಿಗಳು ವಾಹನ ತಪಾಸಣೆ ಮಾಡುತ್ತಿದ್ದಾಗ ಈ ಮಾರ್ಗವಾಗಿ ಬುಲೆರೋ ವಾಹನದಲ್ಲಿ ಸಾಗಿಸುತ್ತಿದ್ದ 58 ಕೆ.ಜಿ. ಚಿನ್ನ ಸಿಕ್ಕಿದೆ. ಘಟನೆ ಸಂಬಂಧ ವಾಹನದಲ್ಲಿದ್ದ ನಾಲ್ವರನ್ನು ಚನ್ನರಾಯಪಟ್ಟಣ ಪೆÇಲೀಸರ ವಶಕ್ಕೆ ತೆಗೆದುಕೊಂಡಿದ್ದಾರೆ.  ಸುದ್ದಿ ತಿಳಿದು ವಾಣಿಜ್ಯ ತೆರಿಗೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಈ ಆಭರಣಕ್ಕೆ ದಾಖಲೆಗಳಿವೆಯೇ ಎಂಬ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ