ಸಿಯೋಲ ಏ.27- ಇದೇ ಮೊದಲ ಬಾರಿಗೆ ಉತ್ತರ ಕೊರಿಯಾ ಅಧ್ಯಕ್ಷ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ದಕ್ಷಿಣ ಕೊರಿಯಾಗೆ ಭೇಟಿ ನೀಡಿದ್ದು, ಐತಿಹಾಸಿಕ ದ್ವಿಪಕ್ಷೀಯ ಮಾತುಕತೆಗೆ ಚಾಲನೆ ನೀಡಿದ್ದಾರೆ.
ಈ ಹಿಂದೆ ಅಮೆರಿಕ ದ್ವಿಪಕ್ಷೀಯ ಮಾತುಕತೆಗೆ ಮುಂದಾದರೆ ತನ್ನ ಅಣ್ವಸ್ತ್ರ ಯೋಜನೆ ಕೈಬಿಡುವ ಕುರಿತು ಆಲೋಚನೆ ಮಾಡುವುದಾಗಿ ಹೇಳುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಗೆ ಗ್ರಾಸವಾಗಿದ್ದ ಮ್ ಜಾಂಗ್ ಉನ್ ಇದೇ ಮೊದಲ ಬಾರಿಗೆ ತನ್ನ ವೈಷಮ್ಯ ಮರೆತು ದಕ್ಷಿಣ ಕೊರಿಯಾ ನೆಲದ ಮೇಲೆ ಕಾಲಿರಿಸಿದ್ದಾರೆ.
ತೀವ್ರ ಕುತೂಹಲ ಕೆರಳಿಸಿದ್ದ ಉತ್ತರ ಕೊರಿಯಾ ಅಧ್ಯಕ್ಷ ಮ್ ಜಾಂಗ್ ಉನ್ ರ ದಕ್ಷಿಣ ಕೊರಿಯಾ ಭೇಟಿ ಕೊನೆಗೂ ಆರಂಭವಾಗಿದ್ದು, ವಿವಾದಿತ ದಕ್ಷಿಣ ಭಾಗದ ಗಡಿಯನ್ನು ದಾಟಿ ಉನï ದಕ್ಷಿಣ ಕೊರಿಯಾಗೆ ಭೇಟಿ ನೀಡಿದ್ದಾರೆ. 1950-53ರ ಕೊರಿಯಾ ಯುದ್ಧದ ಬಳಿಕ ಇದೇ ಮೊದಲ ಬಾರಿಗೆ ಉತ್ತರ ಕೊರಿಯಾ ಅಧ್ಯಕ್ಷರೊಬ್ಬರು ದಕ್ಷಿಣ ಕೊರಿಯಾಗೆ ಭೇಟಿ ನೀಡಿದ್ದು, ಐತಿಹಾಸಿಕ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.