ಪ್ರಧಾನಿ ನರೇಂದ್ರ ಮೋದಿ ಚೀನಾ ಅಧ್ಯಕ್ಷ ಜಿನ್‍ಪಿಂಗ್ ಷಿ ಮಹತ್ವದ ಸಮಾಲೋಚನೆ :

ಬೀಜಿಂಗ್, ಏ.27- ವುಹಾನ್‍ನಲ್ಲಿ ಇಂದಿನಿಂದ ಆರಂಭವಾಗಲಿರುವ ಎರಡು ದಿನಗಳ ಶೃಂಗಸ¨sಯಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಚೀನಾ ಅಧ್ಯಕ್ಷ ಜಿನ್‍ಪಿಂಗ್ ಷಿ ಮಹತ್ವದ ಸಮಾಲೋಚನೆ ನಡೆಸಿದರು.
ವುಹಾನ್‍ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಚೀನಾ ಸರ್ಕಾರದ ಅಧಿಕಾರಿಗಳು ಸ್ವಾಗತಿಸಿದರು.
ಚೀನಾ ಅಧ್ಯಕ್ಷರೊಂದಿಗೆ ಶೃಂಗಸ¨sಯಲ್ಲಿ ಪಾಲ್ಗೊಳ್ಳಲಿರುವ ಪ್ರಧಾನಿ ಮೋದಿ, ಭಾರತ-ಚೀನಾ ಶೀತಲ ಸಮರಕ್ಕೆ ಕಾರಣವಾಗಿರುವ ಡೊಕ್ಲಾಂ ವಿವಾದ ಚರ್ಚೆ ನಡೆಸಲಿದ್ದಾರೆ.
ಇದಲ್ಲದೆ ಉಭಯ ದೇಶಗಳ ನಡುವಿನ ವಾಣಿಜ್ಯ ಒಪ್ಪಂದ ಹಾಗೂ ಉಭಯ ದೇಶಗಳ ನಡುವಿನ ಸಾಮಾನ್ಯ ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ. ಎರಡೂ ದೇಶಗಳ ನಡುವೆ ಇರುವ ಗಂಭೀರ ವಿಚಾರಗಳ ಕುರಿತು ಚರ್ಚೆ ನಡೆಸಿ ಇತ್ಯರ್ಥ ಪಡಿಸುವ ಪ್ರಯತ್ನ ಮಾಡಲಿದ್ದು, ಪ್ರಸ್ತುತ ಮತ್ತು ಭವಿಷ್ಯದ ಅಂತಾರಾಷ್ಟ್ರೀಯ ಪರಿಸ್ಥಿತಿಗಳ ಕುರಿತು ಮಾತುಕತೆ ನಡೆಸಲಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ