ನವದೆಹಲಿ, ಏ.27-ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳು(ದೌರ್ಜನ್ಯಗಳ ತಡೆ) ಕಾಯ್ದೆ (ಎಸ್‍ಸಿ/ಎಸ್‍ಟಿ ಕಾಯ್ದೆ) ಕುರಿತು ವಿವಾದ ಸೃಷ್ಟಿಯಾಗಿರುವ ಹಿನ್ನೆ¯ಯಲ್ಲಿ ತನ್ನ ತೀರ್ಪನ್ನು ಪರಾಮರ್ಶಿಸುವಂತೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿರುವ ಮನವಿಯನ್ನು ಸುಪ್ರೀಂಕೋರ್ಟ್ ಮೇ 3ರಂದು ವಿಚಾರಣೆಗಾಗಿ ಕೈಗೆತ್ತಿಕೊಳ್ಳಲಿದೆ.
ನ್ಯಾಯಮೂರ್ತಿಗಳಾದ ಎ.ಕೆ.ಗೋಯೆಲ್ ಮತ್ತು ದೀಪಕ್ ಗುಪ್ತ ಅವರನ್ನು ಒಳಗೊಂಡ ಪೀಠದ ಮುಂದೆ ಸರ್ಕಾರದ ಪರವಾಗಿ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಮನವಿ ಸಲ್ಲಿಸಿ ಈ ಪ್ರಕರಣದ ತ್ವರಿತ ವಿಚಾರಣೆಗೆ ಕೋರಿದರು. ಈ ಸಂಬಂಧ ತಾವು ಈಗಾಗಲೇ ಲಿಖಿತ ಮನವಿ ಸಲ್ಲಿಸಿರುವುದಾಗಿ ತಿಳಿಸಿದರು.
ಈ ಸಂಬಂಧ ಕೇಂದ್ರ ಸರ್ಕಾರ ಹಾಗು ನಾಲ್ಕು ಇತರ ರಾಜ್ಯಗಳು ಮರುಪರಿಶೀಲನೆ ಅರ್ಜಿ ಸಲ್ಲಿಸಿವೆ. ಈ ಎಲ್ಲ ಅರ್ಜಿಗಳ ಬಗ್ಗೆ ಮೇ 3ರಂದು ವಿಚಾರಣೆ ನಡೆಸುವುದಾಗಿ ನ್ಯಾಯಮೂರ್ತಿ ಗೋಯೆಲ್ ಹೇಳಿದರು.