ಚುನಾವಣಾ ದ್ವೇಷಕ್ಕೆ ರಾಜ್ಯದಲ್ಲಿ ಮೊದಲ ಬಲಿ:

ಗೌರಿಬಿದನೂರು, ಏ.27- ಚುನಾವಣಾ ದ್ವೇಷಕ್ಕೆ ರಾಜ್ಯದಲ್ಲಿ ಮೊದಲ ಬಲಿಯಾಗಿದೆ. ತಾಲ್ಲೂಕಿನ ಕೋಟಾಲದಿನ್ನೆ ಬಳಿ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವಿನ ಘರ್ಷuಯಲ್ಲಿ ಯುವಕನೊಬ್ಬ ಮೃತಪಟ್ಟಿದ್ದು ಮತ್ತೊಬ್ಬ ಯುವಕ ತೀವ್ರವಾಗಿ ಗಾಯಗೊಂಡಿದ್ದಾರೆ.
ರಾಜಕೀಯ ಘರ್ಷಣೆಗೆ ಬಲಿಯಾದ ಯುವಕನನ್ನು ಫ್ಲವರ್ ಡೆಕೋರೇಟರ್ ಹಾಗೂ ಜೆಡಿಎಸ್ ಕಾರ್ಯಕರ್ತ ರಾಮರೆಡ್ಡಿ (27) ಎಂದು ಗುರುತಿಸಲಾಗಿದೆ.
ಘರ್ಷuಯಲ್ಲಿ ಮೃತಪಟ್ಟಿರುವ ರಾಮರೆಡ್ಡಿಗೆ ಮದುವೆ ನಿಶ್ಚಯವಾಗಿದ್ದು, ಮುಂದಿನ ವಾರವೇ ವಿವಾಹ ನೆರವೇರಬೇಕಿತ್ತು.
ಘಟ£ಯಲ್ಲಿ ನರೇಂದ್ರ ಎಂಬ ಮತ್ತೊಬ್ಬ ಯುವಕ ತೀವ್ರವಾಗಿ ಗಾಯಗೊಂಡಿದ್ದು , ಐಸಿಯು ಘಟಕದಲ್ಲಿ ಚಿಕಿತ್ಸೆ ಪqಯುತ್ತಿದ್ದಾರೆ ಎಂದು ಪೆÇಲೀಸರು ಹೇಳಿದ್ದಾರೆ.
ಘಟನೆ ವಿವರ: ಹಿಪ್ಪಾರ ಹಳ್ಳಿಯ ಕಾಂಗ್ರೆಸ್ ಬೆಂಬಲಿತ ರೌಡಿ ಶೀಟರ್ ರಮೇಶ್ ಮತ್ತು ಜೆಡಿಎಸ್ ಕಾರ್ಯಕರ್ತ ರಾಮರೆಡ್ಡಿ ನಡುವೆ ಕೋಟಾಲ ದಿನ್ನೆ ಸಮೀಪದ ಬಾರ್ ಸಮೀಪ ರಾತ್ರಿ ಕ್ಷುಲ್ಲಕ ಕಾರಣಕ್ಕೆ ಜಗಳವಾಯಿತು.
ಕುಡಿದ ಮತ್ತಿನಲ್ಲಿ ಮಾತಿಗೆ ಮಾತು ಬೆಳೆದು ಜಗಳ ರಾಜಕೀಯ ವೈಷಮ್ಯಕ್ಕೆ ತಿರುಗಿ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ.
ಘರ್ಷuಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ರಾಮರೆಡ್ಡಿ ಮತ್ತು ನರೇಂದ್ರ ಎಂಬುವರ ಮೇಲೆ ಲಾಂಗ್, ಮಚ್ಚುಗಳಿಂದ ಹಲ್ಲೆ ನಡೆಸಿದ್ದಾರೆ.
ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿದ್ದ ರಾಮರೆಡ್ಡಿ ಅವರು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ಪೆÇಲೀಸರು ಈ ಸಂಜೆಗೆ ತಿಳಿಸಿದ್ದಾರೆ.
ಘರ್ಷuಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಮೇಶ್ ಹಾಗೂ ಮತ್ತಿಬ್ಬರು ಜೆಡಿಎಸ್ ಕಾರ್ಯಕರ್ತರು ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪqಯುತ್ತಿದ್ದಾರೆ.
ರಾಜಕೀಯ ಘರ್ಷಣೆ ಹಿನ್ನೆ¯ಯಲ್ಲಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ರಮೇಶ್ ದಾಖಲಾಗಿರುವ ಆಸ್ಪತ್ರೆ ಮುಂಭಾಗ ಜೆಡಿಎಸ್ ಕಾರ್ಯಕರ್ತರು ಜಮಾಯಿಸಿ ಕಾಂಗ್ರೆಸ್ ವಿರುದ್ಧ ಘೋಷಣೆಗಳನ್ನು ಕೂಗಿದರು.
ಈ ವೇಳೆ ಕೆಲ ಕಿಡಿಗೇಡಿಗಳು ಪೆÇಲೀಸ್ ಜೀಪಿನ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತಿರುಗುವುದನ್ನು ಮನಗಂಡ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಸ್ಥಳಕ್ಕೆ ದೌಡಾಯಿಸಿ ಪರಿಸ್ಥಿತಿ ನಿಯಂತ್ರಿಸಲು ಹರಸಾಹಸ ನಡೆಸುತ್ತಿದ್ದಾರೆ.
ಕಳೆದ ಯುಗಾದಿ ಹಬ್ಬದ ದಿನ ರಮೇಶ್ ಮತ್ತು ರಾಮರೆಡ್ಡಿ ನಡುವೆ ಕ್ಷುಲ್ಲಕ ವಿಚಾರಕ್ಕಾಗಿ ಜಗಳ ನಡೆದಿತ್ತು.ಈ ಹಳೆ ದ್ವೇಷದ ಹಿನ್ನೆ¯ಯಲ್ಲಿ ಈ ಕೊಲೆ ನಡೆದಿದೆ ಎಂದು ಹಿರಿಯ ಪೆÇಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ