ಬೆಂಗಳೂರು ,ಏ.27-ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸಿ 55ನೇ ಸಿಸಿಎಚ್ ನ್ಯಾಯಾಲಯ ಆದೇಶಿಸಿದೆ.
ಶ್ರೀರಾಮಪುರ ವ್ಯಾಪ್ತಿಯಲ್ಲಿ ಕಳೆದ ಮೇ 3ರಂದು 12 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿ ಶಕ್ತಿವೇಲು ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಂತ್ರಸ್ತೆಯ ತಾಯಿ ಪೆÇಲೀಸರಿಗೆ ದೂರು ನೀಡಿದ್ದರು.
ದೂರಿನ ಮೇರೆಗೆ ಶ್ರೀರಾಮಪುರ ಠಾಣೆ ಪೆÇಲೀಸರು ಪೆÇಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ಇನ್ಸ್ಪೆಕ್ಟರ್ ಅನಿಲ್ ಅವರು ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ಸದರಿ ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾಗಿ ಹಿರೇಮಣಿ ಅವರು ವಾದ ಮಂಡಿಸಿದ್ದರು. ವಾದ ಆಲಿಸಿದ ನ್ಯಾಯಾಲಯ ಆರೋಪಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 2500 ರೂ. ದಂಡ ವಿಧಿಸಿ ಆದೇಶಿಸಿದ್ದಾರೆ.