
ಬೆಂಗಳೂರು ,ಏ.27- ಇಂದು ಬೆಳಗಿನ ಜಾವ ಹಾಗೂ ತಡರಾತ್ರಿ ಸಂಭವಿಸಿದ ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಯಲಹಂಕ ಸಂಚಾರಿ ಠಾಣೆ: ಬೈಕ್ನಲ್ಲಿ ಹೋಗುತ್ತಿದ್ದ ವ್ಯಕ್ತಿ ಆಯತಪ್ಪಿ ಬಿದ್ದು ಸಾವನ್ನಪ್ಪಿರುವ ಘಟನೆ ಯಲಹಂಕ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗಿನ ಜಾವ ಸಂಭವಿಸಿದೆ.
ಎಂ.ಎಸ್.ಪಾಳ್ಯದ ನಿವಾಸಿ ಶಾರುಖ್ ಬೇಗ್(30) ಮೃತಪಟ್ಟ ಬೈಕ್ ಸವಾರ.
ಗುಜರಿ ವ್ಯಾಪಾರಿಯಾದ ಇವರು ಇಂದು ಬೆಳಗಿನ ಜಾವ 3 ಗಂಟೆ ಸಮಯದಲ್ಲಿ ತಮ್ಮ ಬೈಕ್ನಲ್ಲಿ ಸಿಂಗಾಪುರ ಲೇಔಟ್ನಿಂದ ಅಬ್ಬಿಗೆರೆಗೆ ಹೋಗುವ ಮಾರ್ಗದಲ್ಲಿ ತೆರಳುತ್ತಿದ್ದಾಗ ಈ ರಸ್ತೆಯಲ್ಲಿ ಬೀದಿದೀಪ ಇಲ್ಲದ ಕಾರಣ ರಸ್ತೆ ಸರಿಯಾಗಿ ಕಾಣುತ್ತಿರಲಿಲ್ಲ. ಅಲ್ಲದೆ ಇವರ ಬೈಕ್ನಲ್ಲೂ ಸಹ ಲೈಟ್ ಇಲ್ಲದ ಕಾರಣ ನಿಯಂತ್ರಣ ತಪ್ಪಿ ಬೈಕ್ ಉರುಳಿ ಬಿದ್ದಿದೆ.
ಪರಿಣಾಮವಾಗಿ ಶಾರುಖ್ ಅವರು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸುದ್ದಿ ತಿಳಿದ ಪೆÇಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಶವವನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೊಳಪಡಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ದೇವನಹಳ್ಳಿ ಸಂಚಾರಿ ವ್ಯಾಪ್ತಿ: ಕಾರೊಂದು ಅತಿವೇಗವಾಗಿ ಮುನ್ನುಗ್ಗಿ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವನ್ನಪ್ಪಿರುವ ಘಟನೆ ದೇವನಹಳ್ಳಿ ಸಂಚಾರಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಸೂಲಿಬೆಲೆ ನಿವಾಸಿ ಮಧು(20) ಅಪಘಾತದಲ್ಲಿ ಮೃತಪಟ್ಟ ಬೈಕ್ ಸವಾರ.
ರಾತ್ರಿ 11 ಗಂmಯಲ್ಲಿ ಮಧು ತನ್ನ ಸ್ನೇಹಿತನನ್ನು ಬೈಕ್ನಲ್ಲಿ ಕೂರಿಸಿಕೊಂಡು ಹೋಗುತ್ತಿದ್ದಾಗ ಟಿವಿಸಿ ರಸ್ತೆ ಬಳಿ ಅತಿವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮಧು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಹಿಂಬದಿ ಸವಾರ ಗಾಯಗೊಂಡಿದ್ದು , ಇವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ದೇವನಹಳ್ಳಿ ಸಂಚಾರಿ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.