ತುಮಕೂರು, ಏ.28-ನಗರಕ್ಕೆ ನಾಳೆ ಸಂಜೆ 4 ಗಂಟೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಆಗಮಿಸಿ ಪಕ್ಷದ ಅಭ್ಯರ್ಥಿಗಳ ಪರ ರೋಡ್ ಶೋ ನಡೆಸಲಿದ್ದಾರೆ.
ಜಂಟಿ ಪತ್ರಿಕಾಗೋಷ್ಟಿಯಲ್ಲಿ ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಬಿ.ಸುರೇಶ್ಗೌಡ ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಬಿ.ಜ್ಯೋತಿ ಗಣೇಶ್ 11 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪರ ಅಮಿತ್ ಷಾ ಮತಯಾಚನೆ ಮಾಡುವರು. ಸಂಜೆ 4 ಗಂಟೆಯಿಂದ 6 ಗಂಟೆವರೆಗೆ ರೋಡ್ ಶೋ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ನಂತರ ನಗರದ ಶ್ರೀದೇವಿ ಇಂಜಿನಿಯರಿಂಗ್ ಕಾಲೇಜಿಗೆ ತೆರಳಿ ಜಿಲ್ಲೆಯ ಬಿಜೆಪಿ ಮುಖಂಡರ ಸಭೆ ನಡೆಸಿ ಭಿನ್ನಮತ ಶಮನಗೊಳಿಸುವ ಪ್ರಯತ್ನ ಮಾಡಲಿದ್ದಾರೆ.
ಈಗಾಗಲೇ ತುಮಕೂರು ನಗರ ವಿಧಾನಸಭಾ ಕ್ಷೇತ್ರ, ಗುಬ್ಬಿ ವಿಧಾನಸಭಾ ಕ್ಷೇತ್ರ, ಪಾವಗಡ, ಶಿರಾ, ಚಿಕ್ಕನಾಯಕನಹಳ್ಳಿಯಲ್ಲಿ ಸಮರ್ಥರಿಗೆ ಟಿಕೆಟ್ ಕೊಟ್ಟಿಲ್ಲವೆಂಬ ಕಾರಣಕ್ಕೆ ಅಸಮಾಧಾನ ಭುಗಿಲೆದಿದ್ದೆ.
ಬಂಡಾಯವಾಗಿ ಸ್ಪರ್ಧಿಸಿರುವ ಅಭ್ಯರ್ಥಿಗಳೊಂದಿಗೂ ಅಮಿತ್ ಷಾ ಮಾತುಕತೆ ನಡೆಸುವ ಸಾಧ್ಯತೆ ಇದೆ ಎಂದು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಬಿ.ಸುರೇಶ್ಗೌಡ ತಿಳಿಸಿದರು.
ಪತ್ರಿಕಾಗೋಷ್ಟಿಯಲ್ಲಿ ವಿಧಾನಪರಿಷತ್ ಸದಸ್ಯ ಡಾ.ಎಂ.ಆರ್.ಹುಲಿನಾಯ್ಕರ್, ಹೆಬ್ಬಾಕದ ರವಿ, ಕೊಪ್ಪಲ್ ನಾಗರಾಜ್, ರುದ್ರೇಶ್, ಮಹಾನಗರ ಪಾಲಿಕೆ ಸದಸ್ಯ ಬಾವಿಕಟ್ಟೆ ನಗಣ್ಣ ಸ್ನೇಕ್ ನಂದೀಶ್ ಪಾಲ್ಗೊಂಡಿದ್ದರು.