ಔರಾದ್‍ನಲ್ಲಿ ಕಾಂಗ್ರೆಸ್‍ನ ಕೌಡಾಳ ಭರ್ಜರಿ ಪ್ರಚಾರ ಕ್ರೈಸ್ತರ ಅಭಿವೃದ್ಧಿಗೆ ಕಾಂಗ್ರೆಸ್ ಆದ್ಯತೆ

ಬೀದರ್, ಏ. 28- ಔರಾದ್ ಎಸ್ಸಿ ಮೀಸಲು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿಜಯಕುಮಾರ ಕೌಡಾಳ ಮತಯಾಚನೆಗೆ ಚಾಲನೆ ನೀಡಿದ್ದು, ಕ್ಷೇತ್ರದ ವಿವಿಧೆಡೆ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ.

ಶನಿವಾರ ಪಟ್ಟಣದಲ್ಲಿ ಕ್ರಿಶ್ಚಿಯನ್ ಸಮುದಾಯದ ಮುಖಂಡರ ಸಭೆಯಲ್ಲಿ ಮಾತನಾಡಿದ ವಿಧಾನ ಪರಿಷತ್ತಿನ ಸರ್ಕಾರಿ ಮುಖ್ಯ ಸಚೇತಕ ಐವನ್ ಡಿಸೋಜಾ, ಕಾಂಗ್ರೆಸ್ ಹಿಂದಿನಿಂದಲೂ ಕ್ರೈಸ್ತರ ಹಿತ ಕಾಪಾಡಿಕೊಂಡು ಬಂದಿದೆ. ಕ್ರಿಶ್ಚಿಯನ್ ಸಮುದಾಯದಲ್ಲಿ ಇರುವ ಬಡ, ಅಸಹಾಯಕರ ಏಳಿಗೆಗೂ ಪ್ರಾಮಾಣಿಕ ಪ್ರಯತ್ನ ಮಾಡಿದೆ.

ಸರ್ವ ಸಮುದಾಯಗಳ ಕಲ್ಯಾಣಕ್ಕಾಗಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಹತ್ತು ಹಲವು ಯೋಜನೆ ಜಾರಿಗೊಳಿಸಿದೆ. ಒಂದು ಸರ್ಕಾರ ಮನಸ್ಸು ಮಾಡಿದರೆ ರಾಜ್ಯವನ್ನು ಯಾವ ರೀತಿ ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯಬಹುದು ಎನ್ನುವುದನ್ನು ಸಿಎಂ ಸಿದ್ದರಾಮಯ್ಯ ತೋರಿಸಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್ ಅಭ್ಯರ್ಥಿ ವಿಜಯಕುಮಾರ ಕೌಡಾಳ ಮಾತನಾಡಿ, ಸಿಎಂ ಸಿದ್ದರಾಮಯ್ಯ ಐದು ವರ್ಷಗಳ ಅಧಿಕಾರ ಅವಧಿಯಲ್ಲಿ ಕ್ರೈಸ್ತರ ಅಭಿವೃದ್ಧಿಗೆ ಹೆಚ್ಚು ಒತ್ತು ಕೊಟ್ಟಿದ್ದಾರೆ. ಕ್ಷೇತ್ರದ ಜನ ಈ ಬಾರಿ ಕಾಂಗ್ರೆಸ್‍ಗೆ ಬೆಂಬಲಿಸಬೇಕು ಎಂದು ಕರೆ ನೀಡಿದರು.
ಎಂಎಲ್ಸಿ ವಿಜಯಸಿಂಗ್ ಮಾತನಾಡಿದರು. ಪ್ರಮುಖರಾದ ಬಕ್ಕಪ್ಪ ಕಓಟೆ, ಚಂದ್ರಕಾಂತ ಹಿಪ್ಪಳಗಾಂವ, ಸಂಜಯ ಜಾಗೀರದಾರ, ರೋಹಿದಾಸ ಘೋಡೆ ಇತರರಿದ್ದರು.
==================

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ