ಬಿಜೆಪಿ ಅಧಿಕಾರಕ್ಕೆ ಬಂದರೆ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಮಹತ್ವ-ಶೃತಿ

ರಾಯಚೂರು: ಬಿಜೆಪಿ ಅಧಿಕಾರಕ್ಕೆ ಬಂದಮೇಲೆ ಮಹಿಳೆಯರ ಸಬಲೀಕರಣಕ್ಕೆ ಹೆಚ್ಚಿನ ಮಹತ್ವ ನೀಡಲಿದೆ ಎಂದು ಚಿತ್ರ ನಟಿ ಹಾಗೂ ಬಿಜೆಪಿ ಮಹಿಳಾ ಮೋರ್ಚ ಪ್ರಧಾನ ಕಾರ್ಯದರ್ಶಿ ಶೃತಿ ಹೇಳಿದರು.

ಅವರು ನಗರದಲ್ಲಿ ಕರುನಾಡು ಮಹಿಳಾ ಜಾಗೃತಿ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಮಹಿಳೆಯರಿಗೆ ಎಷ್ಟು ಸ್ಥಾನ ಕೊಟ್ಟಿದೆ ಎಂಬುದು ಮುಖ್ಯವಲ್ಲ ಮಹಿಳೆಯರಿಗೆ ಯಾವ ಸ್ಥಾನ ಮಾನ ಕೊಟ್ಟಿದೆ ಎಂಬುದು ಮುಖ್ಯವಾಗಿದೆ ಎಂದರು.

ರಾಜ್ಯದಲ್ಲಿ ಮಹಿಳೆಯರ ಪ್ರತಿನಿಧಿಗಳ ಸಂಖ್ಯೆ ಕಡಿಮೆ ಇರಬಹುದು. ಆದರೆ, ಭಾರತದಲ್ಲಿ ಪುರುಷರಿಗೆ ಮಾತ್ರ ನಿಭಾಯಿಸಲಿಕ್ಕೆ ಸಾಧ್ಯ ಎನ್ನುವ ಕೆಲವು ಸ್ಥಾನಗಳನ್ನು ಮಹಿಳೆಯರಿಗೆ ನೀಡಿದ್ದಾರೆ.

ಭಾರತದಲ್ಲಿ ರಕ್ಷಣೆ ಮಾಡುವ ಶಕ್ತಿ ಮಹಿಳೆಯರಿಗೆ ಇದೆ. ಅದಕ್ಕಾಗಿ ರಕ್ಷಣಾ ಸಚಿವ ಸ್ಥಾನವನ್ನು ನಿರ್ಮಲ ಶೀತಾರಾಮ್ ಅವರಿಗೆ ಅತ್ಯುನ್ನತ ಸ್ಥಾನವನ್ನು ಒದಗಿಸಿಕೊಟ್ಟಿದೆ ಎಂದರು.

ಸ್ಥಳೀಯ ಸಂಸ್ಥೆಗಳಲ್ಲಿ ಶೇ.30 ರಿಂದ 50ಕ್ಕೆ ಹೆಚ್ಚಳ ಮಾಡಿದವರು ಯಡಿಯೂರಪ್ಪನವರು. ಅವರು ಅಧಿಕಾರಕ್ಕೆ ಬಂದ ಮೇಲೆ ಮಹಿಳೆಯರಿಗೆ ಅನುಕೂಲ ಮತ್ತು ಯೋಜನೆಗಳನ್ನು ನೀಡುವರು.

ಈ ಸಂದರ್ಭದಲ್ಲಿ ಮಹಿಳಾ ಮೋರ್ಚ ರಾಜ್ಯ ಪ್ರಧಾನಕಾರ್ಯದರ್ಶಿ ಸುಜಾತಾ ಶಿವರಾಜ್ ಪಾಟೀಲ್ ಇನ್ನಿತರರು ಇದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ