ನಾನು ಕಿಂಗ್ ಮೇಕರ್ ಆಗುವುದಿಲ;. ಕರ್ನಾಟಕ ಜನರ ಆಶೀರ್ವಾದದೊಂದಿಗೆ ಕಿಂಗ್ ಆಗುತ್ತೇನೆ: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ಏ.29-ನಾನು ಕಿಂಗ್ ಮೇಕರ್ ಆಗುವುದಿಲ್ಲ. ಬದಲಿಗೆ ಕರ್ನಾಟಕ ಜನರ ಆಶೀರ್ವಾದದೊಂದಿಗೆ ಕಿಂಗ್ ಆಗುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಜೆಡಿಎಸ್ ತನ್ನ ಸ್ವಂತ ಬಲದ ಮೇಲೆ ಈ ಚುನಾವಣೆಯಲ್ಲಿ ಜಯ ಸಾಧಿಸಿ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂಬ ದೃಢ ವಿಶ್ವಾಸವನ್ನು ಕುಮಾರಸ್ವಾಮಿ ವ್ಯಕ್ತಪಡಿಸಿದರು.

ಸುದ್ದಿ ಸಂಸ್ಥೆಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‍ಮತ್ತು ಬಿಜೆಪಿಯಿಂದ ಜನರು ಭ್ರಮನಿರಸನಗೊಂಡಿದ್ದಾರೆ. ಹೀಗಾಗಿ ಈ ಬಾರಿ ಜನ ಜೆಡಿಎಸ್‍ಗೆ ಬೆಂಬಲ ನೀಡುತ್ತಾರೆ ಎಂಬ ವಿಶ್ವಾಸ ತಮಗಿದೆ ಎಂದರು.
ತಮ್ಮ ಪಕ್ಷ ಬಹುಮತದೊಂದಿಗೆ ಸರ್ಕಾರ ರಚಿಸುತ್ತದೆ. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಪುನರುಚ್ಚಿಸಿದ್ದಾರೆ.
ಮೇ 12ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜನರು ನಮ್ಮ ಪಕ್ಷಕ್ಕೆ ಆಶೀರ್ವಾದ ನೀಡುತ್ತಾರೆ. ಹೀಗಾಗಿ ನಾನು ಕಿಂಗ್ ಆಗುತ್ತೇನೆ ಹೊರತು,ಕಿಂಗ್ ಮೇಕರ್ ಅಲ್ಲ ಎಂದು ಸ್ಪಷ್ಟಪಡಿಸಿದರು.

ತಮ್ಮ ಪಕ್ಷ 113 ಸ್ಥಾನಗಳನ್ನು ಗೆಲ್ಲುವ ಗುರಿಯಿದೆ. ರಾಜ್ಯದ ಜನಾರ್ಶೀವಾದದೊಂದಿಗೆ ಆ ಗುರಿಯೊಂದಿಗೆ ನಾವು ಖಂಡಿತ ತಲುಪುತ್ತೇವೆ ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ