ಕಾಂಗ್ರೆಸ್ ಅಭ್ಯರ್ಥಿ ಚೆಲುವರಾಯಸ್ವಾಮಿ ಆಪ್ತರ ಮನೆ ಮೇಲೆ ಐಟಿ ದಾಳಿ: ದಾಖಲೆಗಳ ಪರಿಶೀಲನೆ

ಬೆಂಗಳೂರು:ಏ-29: ಜೆಡಿಎಸ್‌ ವಿರುದ್ಧ ಬಂಡಾಯವೆದ್ದು ಕಾಂಗ್ರೆಸ್‌ ಸೇರ್ಪಡೆಯಾಗಿ ನಾಗಮಂಗಲ ಕ್ಷೇತ್ರದಿಂದ ಸ್ಪರ್ಧಿಸಿರುವ ಚೆಲುವರಾಯಸ್ವಾಮಿ ಅವರ ಆಪ್ತರ ನಿವಾಸಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಚೆಲುವರಾಯಸ್ವಾಮಿ ಆಪ್ತ, ಸುಖಧರೆಯ ಲಕ್ಷ್ಮೀ ನಾರಾಯಣ ಎನ್ನುವವರ ನಿವಾಸದ ಮೇಲೆ ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿ ವಾಪಾಸಾಗಿದ್ದಾರೆ.

ಸುಖಧರೆಯ ಲಕ್ಷ್ಮೀ ನಾರಾಯಣ ಮಾತ್ರವಲ್ಲದೇ ಇನ್ನಿಬ್ಬರು ಸಂಬಂಧಿಕರ ಮನೆಗಳ ಮೇಲೂ ಐಟಿ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಲಾಗಿದೆ. ಚುನಾವಣೆಗಾಗಿ ಅಕ್ರಮ ಹಣ ದಾಸ್ತಾನು ಮಾಡಿದ್ದ ಆರೋಪದಡಿ ಈ ದಾಳಿ ನಡೆದಿದೆ ಎನ್ನಲಾಗಿದೆ.

ಲಕ್ಷ್ಮೀನಾರಾಯಣ್ ಮುಂಬೈನಲ್ಲಿ ಹೊಟೆಲ್ ಉದ್ಯಮಿಯಾಗಿದ್ದು, ಮೈಸೂರು ಬೆಂಗಳೂರಿಂದ ಬಂದ ಸುಮಾರು 30 ಅಧಿಕಾರಿಗಳ ತಂಡ ದಾಳಿ ಮಾಡಿ ಮನೆಯಲ್ಲಿ ಸಿಕ್ಕದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಅಧಿಕಾರಿಗಳಿಗೆ 30 ಸಾವಿರ ರು. ನಗದು ದೊರೆತಿದ್ದು, ಅದನ್ನು ಮನೆಯವರಿಗೇ ನೀಡಿ ಅಧಿಕಾರಿಗಳು ವಾಪಸ್ ಆಗಿದ್ದಾರೆ ಎಂದು ವರದಿಯಾಗಿದೆ.

karnataka assembly election,IT Raid, Congress, Cheluvaraya Swamy

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ