ಮರಾಠ ಮತದಾರರನ್ನು ಓಲೈಸಿಕೊಳ್ಳಲು ಮುಂದಾz ಸಿಎಂÀ ಕ್ರಮಕ್ಕೆ ಕನ್ನಡ ಗೆಳೆಯರ ಬಳಗ ಖಂದನೆ

ಬೆಂಗಳೂರು, ಏ.29- ಬೆಳಗಾವಿ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನನಗೆ ಮರಾಠಿ ಬರಲ್ಲ ಕ್ಷಮಿಸಿ ಎಂದು ಮರಾಠ ಮತದಾರರನ್ನು ಓಲೈಸಿಕೊಳ್ಳಲು ಮುಂದಾದ ಕ್ರಮ ಅಕ್ಷಮ್ಯ ಎಂದು ಕನ್ನಡ ಗೆಳೆಯರ ಬಳಗ ಖಂಡಿಸಿದೆ.

ಡಾ.ಎಂ.ಚಿದಾನಂದಮೂರ್ತಿ, ಪೆÇ್ರ.ಎಲ್.ಎಸ್.ಶೇಷಗಿರಿರಾವ್, ಗೊ.ರೂ.ಚನ್ನಬಸಪ್ಪ, ಡಾ.ಎಚ್.ಎಂ. ಮರುಳಸಿದ್ದಯ್ಯ, ಡಾ.ವಿಜಯ ಮತ್ತಿತರರನ್ನೊಳಗೊಂಡಿರುವ ಕನ್ನಡ ಗೆಳೆಯರ ಬಳಗ ಪತ್ರಿಕಾ ಹೇಳಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವರ್ತನೆಯನ್ನು ಖಂಡಿಸಿದೆ.

ನಾನು ಕನ್ನಡ ಹೋರಾಟದ ಹಿನ್ನೆಲೆಯಿಂದ ಬಂದವನು. ಕನ್ನಡಕ್ಕೆ ಧಕ್ಕೆಯಾಗುವ ಕೆಲಸ ಮಾಡುವುದಿಲ್ಲ ಎಂದು ಹೇಳಿಕೆ ನೀಡುತ್ತಿದ್ದ ಸಿದ್ದರಾಮಯ್ಯ ಅವರು ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ಮರಾಠರನ್ನು ಓಲಿಸಲು ನನಗೆ ಮರಾಠಿ ಬರಲ್ಲ ಕ್ಷಮಿಸಿ ಎಂದು ಹೇಳಿಕೆ ನೀಡಿರುವುದರಿಂದ ಮುಖ್ಯಮಂತ್ರಿಗಳ ಅವಕಾಶವಾದಿತನ ಬಯಲಾಗಿದೆ ಎಂದು ಕಿಡಿಕಾರಿದ್ದಾರೆ.

ಇತ್ತೀಚೆಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ನಾನು ಮರಾಠಿ ಮಗಳು ಎಂದಿದ್ದರು. ಇದರ ಬೆನ್ನಲ್ಲೆ ಮುಖ್ಯಮಂತ್ರಿಗಳು ಪರಿಷ್ಕøತ ಮಹಿಷಿ ವರದಿ ಜಾರಿಗೊಳಿಸಬೇಕಾದ ಸಂದರ್ಭದಲ್ಲಿ ಕೇವಲ ಮತದಾರರನ್ನು ಸೆಳೆಯುವ ಉದ್ದೇಶದಿಂದ ಮರಾಠಿ ಪರ ಮಾತನಾಡಿರುವುದು ಅಕ್ಷಮ್ಯ ಎಂದು ಜರಿದಿದ್ದಾರೆ.
ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳಿಂದ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಕನ್ನಡಿಗರ ಪರ ಧ್ವನಿ ಎತ್ತಬೇಕು. ಇಲ್ಲದಿದ್ದಲ್ಲಿ ಅಂತಹವರಿಗೆ ಮತದಾರರು ಈ ಬಾರಿಯ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು ಎಂದು ಕನ್ನಡ ಗೆಳೆಯರ ಬಳಗ ಒತ್ತಾಯಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ