ಉಡುಪಿ, ಏ.29- ಪ್ರಧಾನಮಂತ್ರಿ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ಪೆಂಡಾಲ್ ಸಾಗಿಸುತ್ತಿದ್ದ ಲಾರಿ ರಸ್ತೆ ಬದಿಯ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಿರಿಯಡ್ಕ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಅಪಘಾತದಲ್ಲಿ ಇತರ ಏಳು ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ.
ಉಡುಪಿಯಲ್ಲಿ ಮೇ 1ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಪಾಲ್ಗೊಳ್ಳುವ ಸಮಾವೇಶಕ್ಕೆ ಲಾರಿಯಲ್ಲಿ ಪೆಂಡಾಲ್ ಸಾಗಿಸಲಾಗುತ್ತಿತ್ತು.
ತಾಲೂಕಿನ ಪೆರ್ಡೂರು ಬಳಿ ಚಾಲಕನ ನಿಯಂತ್ರಣ ಕಳೆದುಕೊಂಡ ಲಾರಿ ರಸ್ತೆ ಬದಿಯ ಕಂಬಕ್ಕೆ ಡಿಕ್ಕಿ ಹೊಡೆಯಿತು.
ಡಿಕ್ಕಿ ಹೊಡೆದ ರಭಸಕ್ಕೆ ಲಾರಿಯಲ್ಲಿದ್ದ ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದು, ಇತರೆ ಏಳು ಮಂದಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸ್ಥಳಕ್ಕೆ ಹಿರಿಯಡ್ಕ ಪೆÇಲೀಸರು ದೌಡಾಯಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸಿದ್ದಾರೆ.