
ತುಮಕೂರು, ಏ.29-ಜಿಲ್ಲೆಯ ಪ್ರತಿಯೊಬ್ಬ ನಾಗರಿಕರು ಮತ ಕೇಂದ್ರಗಳಿಗೆ ಆಗಮಿಸಿ ಮತ ತಮ್ಮ ಹಕ್ಕನ್ನು ಚಲಾಯಿಸುವಂತೆ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕಣ್ಮನಿ ಜಾಯ್ ಕರೆ ನೀಡಿದರು.
ಕ್ಯಾತಸಂದ್ರ ಬಳಿ ಇರುವ ಜಾಸ್ಟೋಲ್ನಲ್ಲಿ ಮತದಾರರಿಗೆ ಅರಿವು ಮೂಡಿಸುವ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಬೈಕ್ ರ್ಯಾಲಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮೇ 12 ರಂದು ನಡೆಯುವ ಮತದಾನದ ದಿನದಂದು ಪ್ರತಿಯೊಬ್ಬರು ಮತ ಕೇಂದ್ರಗಳಿಗೆ ಆಗಮಿಸಿ ಮತ ಚಲಾಯಿಸಿ 18 ವರ್ಷ ಮೇಲ್ಪಟ್ಟಂತಹ ಪ್ರತಿಯೊಬ್ಬರು ಮತ ಚಲಾಯಿಸುವಂತೆ ಮನವಿ ಮಾಡಿದರು.
ವಿದ್ಯಾರ್ಥಿವಂತರು, ತಮ್ಮ ಮನೆ ಹಾಗೂ ಅಕ್ಕಪಕ್ಕದ ಮನೆಯವರು ಹಾಗೂ ಗ್ರಾಮದಲ್ಲಿರುವ ಪ್ರತಿಯೊಬ್ಬರೂ ಮತದಾನ ಮಾಡುವಂತೆ ಮನವಿ ಮಾಡಿದರು.
ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಡಾ.ದಿವ್ಯಾಗೋಪಿನಾಥ್ ಮಾತನಾಡಿ, ಇಂದಿನ ಬೈಕ್ ರ್ಯಾಲಿಯಲ್ಲಿ ಭಾಗವಹಿಸಿ ಮತ ಕೇಂದ್ರಗಳಿಗೆ ಆಗಮಿಸಿ ಮತದಾನ ಮಾಡಲು ಜನರಲ್ಲಿ ಅರಿವು ಮೂಡಿಸುವ ಈ ಕಾರ್ಯಕ್ರಮ ವಿಶೇಷವಾಗಿದೆ ಎಂದರು.