ಮಂಡ್ಯ, ಏ.30- ಕ್ಷೇತ್ರದ ಅಭ್ಯರ್ಥಿಯೊಬ್ಬರ ಪರವಾಗಿ ವಿಧಾನಸಭಾ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ನಗರಸಭೆಯ ಮೂವರು ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ.
ನಗರಸಭೆ ಗುತ್ತಿಗೆ ನೌಕರ ಮೇಸ್ತ್ರಿಗಳಾದ ಮುತ್ತಾಲಯ್ಯ, ರಾಜು ಮತ್ತು ಗುತ್ತಿಗೆ ಪೌರ ಕಾರ್ಮಿಕ ನಾಗರಾಜು ಅವರನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಎನ್.ಮಂಜುಶ್ರೀ ಅವರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಚುನಾವಣಾ ಆಯೋಗದ ನೀತಿ ಸಂಹಿತೆ ಉಲ್ಲಂಘಿಸಿ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಎಂ.ಬಿ.ನಾಗಣ್ಣ ಪರ ಪ್ರಚಾರ ಮಾಡುತ್ತಿದ್ದರು ಎಂಬ ಆರೋಪದ ಹಿನ್ನೆಲೆಯಲ್ಲಿ ನಗರಸಭೆಯ ಮೂವರು ಸಿಬ್ಬಂದಿಗಳು ಅಮಾನತುಗೊಂಡಿದ್ದಾರೆ.