ಬೀದರ್, ಏ. 30- ಔರಾದ್ ಮೀಸಲು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಭು ಚವ್ಹಾಣ್ ಅವರು ಕ್ಷೇತ್ರದ ವಿವಿಧ ಹಳ್ಳಿಗಳಿಗೆ ಭೇಟಿ ನೀಡಿ ಮತಯಾಚನೆ ಮಾಡಿದರು.
ಖತಗಾಂವ ಗ್ರಾಮಕ್ಕೆ ಭೇಟಿ ನೀಡಿ ಮಾತನಾಡಿ, ಜಾತಿ, ಧರ್ಮ ಒಡೆದು ರಾಜಕಾರಣ ಮಾಡುವ ಕಾಂಗ್ರೆಸ್ ಈ ಬಾರಿ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.
ಪ್ರಭು ಚವ್ಹಾಣ್ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ಮುಕ್ತಕ್ಕೆ ದಿನಗಣನೆ ಶುರುವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಐದು ವರ್ಷದ ಆಡಳಿತದಿಂದ ನಾಡಿನ ಜನ ಬೇಸತ್ತಿದ್ದಾರೆ. ಸಮಾಜದಲ್ಲಿ ಜಾತಿ ನಡುವೆ ವಿಷ ಬೀಜ ಬಿತ್ತಿ ಧರ್ಮ ಸಂಘರ್ಷಕ್ಕೆ ಕಾರಣರಾಗಿದ್ದಾರೆ. ಇವರಿಗೆ ಜನತೆ ಮನೆಗೆ ಕಳಿಸಲು ನಿರ್ಧರಿಸಿದ್ದಾಗಿದೆ. ಉತ್ತರ ಪ್ರದೇಶದ ಮಾದರಿಯಂತೆ ಬಿಜೆಪಿಗೆ ರಾಜ್ಯದಲ್ಲಿ ನಿಚ್ಚಳ ಬಹುಮತ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮರಾಠಾ ಸಮಾಜವನ್ನು ಪ್ರವರ್ಗ 2ಎಗೆ ಸೇರ್ಪಡೆ ಮಾಡುವುದಾಗಿ ಪಕ್ಷದ ರಾಜ್ಯಾಧ್ಯಕ್ಷರಾದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬಂದ ತಕ್ಷಣ ಮೊದಲು ಈ ಕೆಲಸ ಮಾಡಿ ಮರಾಠಾ ಸಮಾಜಕ್ಕೆ ಯಡಿಯೂರಪ್ಪ ಅವರು ಸಿಹಿ ಸುದ್ದಿ ನೀಡುವರು ಎಂದು ಹೇಳಿದರು.