ಜೂನ್ 8ರಿಂದ 20ರವರೆಗೆ ನಡೆಯುವ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಶುಲ್ಕ ಪಾವತಿಸಲು ಮೇ 15 ಕಡೇ ದಿನ

ಬೆಂಗಳೂರು, ಏ.30- ಜೂನ್ 8ರಿಂದ 20ರವರೆಗೆ ನಡೆಯುವ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಶುಲ್ಕ ಪಾವತಿಸಲು ಮೇ 15 ಕಡೇ ದಿನ. ಕಾಲೇಜಿನವರು ಪರೀಕ್ಷಾ ಶುಲ್ಕವನ್ನು ಒಂದೇ ಕಂತಿನಲ್ಲಿ ಖಜಾನೆಗೆ ಸಂದಾಯ ಮಾಡಬೇಕು ಎಂದು ಪದವಿ ಪೂರ್ವ ಶಿಕ್ಷಣ ಮಂಡಳಿಯ ನಿರ್ದೇಶಕಿ ಶಿಖಾ ತಿಳಿಸಿದರು.
ಕಾಲೇಜಿನವರು ಪರೀಕ್ಷಾ ಅರ್ಜಿಗಳನ್ನು ಮೂಲ ಚಲನ್ ಸಹಿತ ಜಿಲ್ಲಾ ಉಪ ನಿರ್ದೇಶಕರ ಕಚೇರಿಗೆ ಕಡ್ಡಾಯವಾಗಿ ಮೇ 17 ಕ್ಕೂ ಮುನ್ನ ಸಲ್ಲಿಸಬೇಕು.
ಪೂರಕ ಪರೀಕ್ಷೆಗೆ ವಿದ್ಯಾರ್ಥಿಗಳು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಪ್ರವರ್ಗ 1ರ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಉಳಿದ ವಿದ್ಯಾರ್ಥಿಗಳು ಒಂದು ವಿಷಯಕ್ಕೆ 140 ರೂ. ಎರಡು ವಿಷಯಕ್ಕೆ 270 ರೂ. ಮೂರಕ್ಕಿಂತ ಹೆಚ್ಚಿನ ವಿಷಯಕ್ಕೆ 400 ರೂ. ಶುಲ್ಕವನ್ನು ಪಾವತಿಸಬೇಕು.
ಎಸ್ಸಿ – ಎಸ್ಟಿ, ಪ್ರವರ್ಗ 1 ಸೇರಿದಂತೆ ಎಲ್ಲಾ ವಿದ್ಯಾರ್ಥಿಗಳು 50 ರೂ. ಅಂಕ ಪಟ್ಟಿ ಶುಲ್ಕ ಪಾವತಿಸಬೇಕು.
ಫಲಿತಾಂಶ ತಿರಸ್ಕರಣಾ ಶುಲ್ಕ ಒಂದು ಬಾರಿಗೆ 175 ರೂ. ಎರಡು ಮತ್ತು ಅಂತಿಮ ಹಂತಕ್ಕೆ 350 ರೂ. ನಿಗದಿಪಡಿಸಲಾಗಿದೆ ಎಂದು ಅವರು ಹೇಳಿದರು.
ಪಿಸಿಎಂಬಿ ವಿಷಯ ಹೊರತುಪಡಿಸಿ ಉಳಿದೆಲ್ಲಾ ವಿಷಯಗಳಿಗೂ ಈ ಪೂರಕ ಪರೀಕ್ಷೆ ಕಡೆಯದಾಗಿರುತ್ತದೆ ಎಂದು ಅವರು ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ