ಜೆಹನಾಬಾದ್, ಏ.30-ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾದ ಬಿಹಾರದ ಜೆಹನಾಬಾದ್ನಲ್ಲಿ ನಡೆದ ಯುವತಿಯ ಮೇಲಿನ ಲೈಂಗಿಕ ಕಿರುಕುಳ ಪ್ರಕರಣದ ಸಂಬಂಧ ಆರು ಯುವಕರನ್ನು ಪೆÇಲೀಸರು ಬಂಧಿಸಿದ್ದಾರೆ. ನಾಪತ್ತೆಯಾಗಿರುವ ಇತರ ಇಬ್ಬರಿಗಾಗಿ ಶೋಧ ಮುಂದುವರಿದಿದೆ. ಮೋಟಾರ್ ಸೈಕಲ್ಗಳಲ್ಲಿ ಬಂದ ಯುವಕರ ಗುಂಪೆÇಂದು ಯುವತಿಯನ್ನು ನಡು ರಸ್ತೆಯಲ್ಲೇ ಅಡ್ಡಗಟ್ಟಿ ಬಟ್ಟೆ ಹರಿದು ಲೈಂಗಿಕ ಕಿರುಕುಳ ನೀಡಿದರು. ಆಕೆಯ ಮೇಲೆ ದೌರ್ಜನ್ಯ ನಡೆಯುತ್ತಿದ್ದರೂ ಸಾರ್ವಜನಿಕರು ರಕ್ಷಣೆಗೆ ಧಾವಿಸಲಿಲ್ಲ. ಈ ದೃಶ್ಯವನ್ನು ಸೆರೆಹಿಡಿದ ವ್ಯಕ್ತಿಯೊಬ್ಬರು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಮಾಡಿದ ನಂತರ ದೇಶವ್ಯಾಪಿ ಆಕ್ರೋಶ ವ್ಯಕ್ತವಾಗಿತ್ತು. ಎಚ್ಚೆತ್ತ ಉನ್ನತ ಪೆÇಲೀಸ್ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿ ಆರು ಯುವಕರನ್ನು ಬಂಧಿಸಿದ್ದಾರೆ. ಪರಾರಿಯಾಗಿರುವ ಇನ್ನಿಬ್ಬರು ದುಷ್ಕರ್ಮಿಗಳಾಗಿ ಶೋಧ ಮುಂದುವರಿದಿದೆ.