ಬೆಂಗಳೂರು, ಏ.30- ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಅಂಕಪಟ್ಟಿಗಳನ್ನು ಮೇ ಅಂತ್ಯದೊಳಗೆ ಆಯಾ ಕಾಲೇಜುಗಳಿಗೆ ಕಳುಹಿಸಕೊಡಲಾಗುವುದು ಎಂದು ಪದವಿ ಪೂರ್ವ ಶಿಕ್ಷಣ ಮಂಡಳಿಯ ನಿರ್ದೇಶಕಿ ಶಿಖಾ ತಿಳಿಸಿದರು.
ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳ ಭಾವಚಿತ್ರದಲ್ಲಿನ ನ್ಯೂನತೆ ಸರಿಪಡಿಸಲು ಮೇ 2ರಿಂದ 10ರವರೆಗೆ ಇಲಾಖೆಯ ಆನ್‍ಲೈನ್ ಪೆÇೀರ್ಟಲ್ ತೆರೆಯಲಾಗುವುದು ಎಂದರು.
ಉತ್ತರ ಪತ್ರಿಕೆಯ ಸ್ಕ್ಯಾನಿಂಗ್ ಪ್ರತಿ ಮತ್ತು ಮರು ಮೌಲ್ಯಮಾಪನ ಶುಲ್ಕ ಪಾವತಿಸಲು ಆನ್‍ಲೈನ್ ಪೇಮೆಂಟ್ ಸೌಲಭ್ಯ ಕಲ್ಪಿಸಲಾಗಿದ್ದು , ಪ್ರತಿ ವಿಷಯದ ಸ್ಕ್ಯಾನಿಂಗ್ ಪ್ರತಿಗೆ 530 ರೂ. ಶುಲ್ಕ ವಿಧಿಸಲಾಗಿದೆ.
ಉತ್ತರ ಪತ್ರಿಕೆಯ ಸ್ಕ್ಯಾನಿಂಗ್ ಪ್ರತಿಗೆ ಅರ್ಜಿ ಸಲ್ಲಿಸಲು ಮೇ 7 ಕೊನೆಯ ದಿನವಾಗಿದೆ. ಮರು ಮೌಲ್ಯಮಾಪನ ಹಾಗೂ ಮರು ಎಣಿಕೆಗೆ ಅರ್ಜಿ ಸಲ್ಲಿಸಲು ಮೇ 14 ಕೊನೆ ದಿನಾಂಕವಾಗಿದೆ.
ಮರು ಮೌಲ್ಯಮಾಪನದ ಪ್ರತಿ ವಿಷಯಕ್ಕೆ 1670 ರೂ. ನಿಗದಿಪಡಿಸಲಾಗಿದೆ. ಉತ್ತೀರ್ಣ ಅಭ್ಯರ್ಥಿಗಳು ಮುಂದಿನ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮರು ಮೌಲ್ಯಮಾಪನದ ಫಲಿತಾಂಶಕ್ಕಾಗಿ ಕಾಯಬಾರದು.
ಮರು ಮೌಲ್ಯ ಮಾಪನದಲ್ಲಿ ನಿಗದಿಪಡಿಸಿದ ಅಂಕಗಳಿಗಿಂತ ಹೆಚ್ಚಿನ ಅಥವಾ ಕಡಿಮೆ ಅಂಕಗಳು ಬಂದಿದ್ದಲ್ಲಿ ಪರಿಷ್ಕರಿಸಿ ಫಲಿತಾಂಶ ಕಲ್ಪಿಸಲಾಗುವುದು. ಯಾವುದೇ ಕಾರಣಕ್ಕೂ ಮೊದಲು ಪಡೆದ ಅಂಕಗಳನ್ನು ಮರು ಸ್ಥಾಪಿಸಲು ಅವಕಾಶವಿಲ್ಲ.
ಮರು ಮೌಲ್ಯಮಾಪನದ ಫಲಿತಾಂಶವನ್ನು ಇಲಾಖೆಯ ವೆಬ್‍ಸೈಟ್‍ನಲ್ಲಿ ಪ್ರಕಟಿಸಲಾಗುವುದು ಎಂದರು.