ಅಕ್ರಮ ಸಂಬಂಧ ಹೊಂದಿದ್ದ ಇವರಿಬ್ಬರು ರೈಲಿಗೆ ಸಿಕ್ಕಿ ಆತ್ಮಹತ್ಯೆ?

ಕಾನ್ಪುರ, ಏ.30-ಉತ್ತರ ಪ್ರದೇಶದ ಕಾನ್ಪುರದಲ್ಲಿ ವಿವಾಹಿತ ಮಹಿಳೆ ಮತ್ತು ಯುವಕನ ಶವಗಳು ರೈಲ್ವೆ ಹಳಿ ಮೇಲೆ ಪತ್ತೆಯಾಗಿದೆ. ಅಕ್ರಮ ಸಂಬಂಧ ಹೊಂದಿದ್ದ ಇವರಿಬ್ಬರು ರೈಲಿಗೆ ಸಿಕ್ಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೆÇಲೀಸರು ಶಂಕಿಸಿದ್ದರೂ, ಕೊಲೆಯಾಗಿರುವ ಸಾಧ್ಯತೆಯೂ ಇದೆ ಎನ್ನಲಾಗಿದೆ.
ಕಾನ್ಪುರದ ಗೋವಿಂದ್ ಪೆÇಲೀಸ್ ಠಾಣೆ ವ್ಯಾಪ್ತಿಯ ನಿವಾಸಿ ಕನ್ಹಯ್ಯ ಎಂಬ ಯುವಕ, ವಿವಾಹಿತ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ. ಈ ವಿಚಾರ ಎರಡೂ ಕುಟುಂಬಗಳಿಗೂ ತಿಳಿದು, ಗಲಾಟೆ ನಡೆದಿತ್ತು.
ಇದಾದ ಬಳಿಕ ಶನಿವಾರ ರಾತ್ರಿಯಿಂದ ಮಹಿಳೆ ಮತ್ತು ಯುವಕ ಇಬ್ಬರೂ ನಾಪತ್ತೆಯಾಗಿದ್ದರು. ನಿನ್ನೆ ಪಂಕಿ ಪ್ರದೇಶದ ರೈಲ್ವೆ ಹಳಿಗಳ ಮೇಲೆ ಇಬ್ಬರ ಮೃತದೇಹಗಳು ಪತ್ತೆಯಾಗಿವೆ ಎಂದು ಹೆಚ್ಚುವರಿ ಪೆÇಲೀಸ್ ಆಯುಕ್ತ ಸಂಜೀವ್ ಸುಮನ್ ತಿಳಿಸಿದ್ದಾರೆ.
ಎರಡೂ ಶವಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಇದು ಆತ್ಯಹತ್ಯೆಯೇ ಅಥವಾ ಕೊಲೆಯೋ ಎಂಬ ಬಗ್ಗೆ ತನಿಖೆ ಮುಂದುವರಿದಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ