ಬೆಂಗಳೂರು:ಮೇ-1: ನೆಲಮಂಗಲದ ಟೋಲ್ ಬಳಿ ಕಾರಿನಲ್ಲಿ ಸಾಗಿಸುತ್ತಿದ್ದ 85 ಲಕ್ಷ ರೂ. ನಗದನ್ನು ಐಟಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ನೀತಿಸಂಹಿತೆ ಉಲ್ಲಂಘನೆ ಮಾಡಿದ ಆರೋಪದಡಿ ಮಹೇಂದ್ರ ಕ್ಸೈಲೊ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ನಗದನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಐಟಿ ಹಾಗೂ ಎಸ್ಎಸ್ಟಿ ಜಂಟಿ ಕಾರ್ಯಾಚರಣೆಯಲ್ಲಿ ಬೆಳಗ್ಗೆ 7 ಗಂಟೆ ಸುಮಾರಿಗೆ 85 ಲಕ್ಷ ರೂ. ಜಪ್ತಿ ಮಾಡಲಾಗಿದ್ದು, ಪ್ರಕರಣದ ಕುರಿತು ಐಟಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಜಿಲ್ಲಾಧಿಕಾರಿಗೂ ಮಾಹಿತಿ ನೀಡಲಾಗಿದೆ ಎಂದು ಚುನಾವಣಾಧಿಕಾರಿ ಶಿವಾನಂದ ತಿಳಿಸಿದ್ದಾರೆ.
Assembly Election,Code Of Conduct,Money Sieze