ಕಾರಿನಲ್ಲಿ ಸಾಗಿಸುತ್ತಿದ್ದ 85 ಲಕ್ಷ ರೂ. ನಗದು ವಶ

ಬೆಂಗಳೂರು:ಮೇ-1: ನೆಲಮಂಗಲದ ಟೋಲ್​ ಬಳಿ ಕಾರಿನಲ್ಲಿ ಸಾಗಿಸುತ್ತಿದ್ದ 85 ಲಕ್ಷ ರೂ. ನಗದನ್ನು ಐಟಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ನೀತಿಸಂಹಿತೆ ಉಲ್ಲಂಘನೆ ಮಾಡಿದ ಆರೋಪದಡಿ ಮಹೇಂದ್ರ ಕ್ಸೈಲೊ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ನಗದನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಐಟಿ ಹಾಗೂ ಎಸ್​ಎಸ್​ಟಿ ಜಂಟಿ ಕಾರ್ಯಾಚರಣೆಯಲ್ಲಿ ಬೆಳಗ್ಗೆ 7 ಗಂಟೆ ಸುಮಾರಿಗೆ 85 ಲಕ್ಷ ರೂ. ಜಪ್ತಿ ಮಾಡಲಾಗಿದ್ದು, ಪ್ರಕರಣದ ಕುರಿತು ಐಟಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಜಿಲ್ಲಾಧಿಕಾರಿಗೂ ಮಾಹಿತಿ ನೀಡಲಾಗಿದೆ ಎಂದು ಚುನಾವಣಾಧಿಕಾರಿ ಶಿವಾನಂದ ತಿಳಿಸಿದ್ದಾರೆ.

Assembly Election,Code Of Conduct,Money Sieze

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ