ಶೃಂಗೇರಿ ಹಾಗೂ ರಂಭಾಪುರಿ ಮಠಗಳಿಗೆ ಅಮಿತ್ ಶಾ ಭೇಟಿ: ಸ್ವಾಮೀಜಿಗಳ ಆಶೀರ್ವಾದ ಪಡೆದ ಬಿಜೆಪಿ ಅಧ್ಯಕ್ಷ

ಶೃಂಗೇರಿ:ಮೇ-1:ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಮತದಾರರನ್ನು ಸೆಳೆಯಲ್ಲಿ ಅಬ್ಬರದ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಇಂದು ಶೃಂಗೇರಿ ಹಾಗೂ ರಂಭಾಪುರಿ ಮಠಗಳಿಗೆ ಭೇಟಿ ನೀಡಿದರು.

ಬೆಳಿಗ್ಗೆ ಶೃಂಗೇರಿ ಮಠಕ್ಕೆ ಆಗಮಿಸಿದ ಅಮಿತ್​ ಷಾ, ಜಗದ್ಗುರು ಶ್ರೀ ಭಾರತೀತೀರ್ಥ ಸ್ವಾಮೀಜಿಯವರ ಆಶೀರ್ವಾದ ಪಡೆದರು. ನಂತರ ಗೌರಿಶಂಕರ ಸಭಾಂಗಣದಲ್ಲಿ ಕಾರ್ಯಕರ್ತರ ಸಭೆ ನಡೆಸಿದರು.

ಬಳಿಕ ಬಾಳೇಹೊನ್ನೂರಿನಲ್ಲಿರುವ ಶ್ರೀ ರಂಭಾಪುರಿ ಮಠಕ್ಕೆ ತೆರಳಿ ಶ್ರೀ ವೀರಸೋಮೇಶ್ವರ ಶಿವಾಚಾರ್ಯ ಜಗದ್ಗುರುಗಳನ್ನು ಭೇಟಿ ಮಾಡಿದರು. ಸ್ವಾಮೀಜಿಗಳು ಷಾ ಅವರಿಗೆ ಶಾಲು ಹೊದಿಸಿ, ಫಲಪುಷ್ಪ ನೀಡಿ ಆಶಿರ್ವದಿಸಿದರು.

Karnataka assembly election,BJP,Amith shah,Shringeri mat,rambhapuri mat

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ