ವಿದ್ಯಾರ್ಥಿಗಳು ಕ್ಷಣಿಕ ಆಸೆ ಆಕಾಂಕ್ಷೆಗಳಿಗೆ ಬಲಿಯಾಗದೆ ಉತ್ತಮ ಗುರಿ ಇಟ್ಟುಕೊಂಡು ನಡೆದರೆ ಬದುಕು ಹಸನು: ಕಲ್ಪತರು ವಿದ್ಯಾಸಂಸ್ಥೆ ಅಧ್ಯಕ್ಷ ಪಿ.ಕೆ. ತಿಪ್ಪೇರುದ್ರಪ್ಪ ಸಲಹೆ

Varta Mitra News

 

ತಿಪಟೂರು,ಮೇ1-ವಿದ್ಯಾರ್ಥಿಗಳು ಕ್ಷಣಿಕ ಆಸೆ ಆಕಾಂಕ್ಷೆಗಳಿಗೆ ಬಲಿಯಾಗದೆ ಉತ್ತಮ ಗುರಿ ಇಟ್ಟುಕೊಂಡು ಗುರುಹಿರಿಯರ ಮಾರ್ಗದರ್ಶನದಲ್ಲಿ ನಡೆದರೆ ಬದುಕು ಹಸನಾಗಿರುತ್ತದೆ ಎಂದು ಕಲ್ಪತರು ವಿದ್ಯಾಸಂಸ್ಥೆ ಅಧ್ಯಕ್ಷ ಪಿ.ಕೆ. ತಿಪ್ಪೇರುದ್ರಪ್ಪ ತಿಳಿಸಿದರು.

ನಗರದ ಕಲ್ಪತರು ತಾಂತ್ರಿಕ ಮಹಾವಿದ್ಯಾಲಯದ ಹಳೇ ವಿದ್ಯಾರ್ಥಿ ಸಂಘದ ವತಿಯಿಂದ ಏರ್ಪಡಿಸಿದ್ದ ಹಳೆ ವಿದ್ಯಾರ್ಥಿಗಳ ಸಂಗಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಪ್ರಾಮಾಣಿಕ ಪ್ರಯತ್ನ, ತಾಳ್ಮೆಯ ಜೊತೆಗೆ ದೈಹಿಕ ಸದೃಢತೆ, ಭಾಷಾ ಪ್ರಾವೀಣ್ಯತೆ, ಉದ್ಯಮ ಕೌಶಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದರು.

ಕಲ್ಪತರು ವಿದ್ಯಾಸಂಸ್ಥೆಯ ಖಜಾಂಚಿ ಟಿ.ಎಸ್. ಶಿವಪ್ರಸಾದ್ ಮಾತನಾಡಿ, ಇದು ಸ್ಪರ್ಧಾತ್ಮಕ ಜಗತ್ತಾಗಿದ್ದು, ವಿದ್ಯಾರ್ಥಿಗಳು ಕ್ರೀಯಾಶೀಲರಾಗಿ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಮೂಲಕ ಸಾಧಿಸುವ ಛಲ ಮತ್ತು ಹಂಬಲ ಇರಬೇಕು. ಧೈರ್ಯ ಮತ್ತು ಆತ್ಮವಿಶ್ವಾಸ ನಿಮ್ಮಲ್ಲಿದ್ದರೆ ಗುರಿ ತಲುಪುವುದು ಸುಲಭ. ತಾಂತ್ರಿಕ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶಗಳು ಹೆಚ್ಚಿದ್ದು, ವಿದ್ಯಾಭ್ಯಾಸದ ಕಡೆ ಹೆಚ್ಚು ಒತ್ತು ನೀಡುವ ಜೊತೆಗೆ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದರು.

ಕಲ್ಪತರು ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ನಂದೀಶಯ್ಯ ಮಾತನಾಡಿ, ಹಳೆ ವಿದ್ಯಾರ್ಥಿಗಳು ಪ್ರಸ್ತುತ ವಿದ್ಯಾರ್ಥಿಗಳಿಗೆ ಪ್ರೇರಕವಾಗಿದ್ದು, ನಮ್ಮ ಕಾಲೇಜಿನಲ್ಲಿ ಓದಿದ ವಿದ್ಯಾರ್ಥಿಗಳು ಉನ್ನತ ಉದ್ಯೋಗ ಪಡೆದು ವಿವಿಧ ರೀತಿ ಸೇವೆ ಸಲ್ಲಿಸುತ್ತಿದ್ದಾರೆ. ಅದೇ ರೀತಿ ಪ್ರಸ್ತುತ ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಕಡೆ ಹೆಚ್ಚು ಒತ್ತು ನೀಡಬೇಕೆಂದರು.

ಕೆವಿಎಸ್ ಉಪಾಧ್ಯಕ್ಷರಾದ ಎಸ್.ಎಸ್. ನಟರಾಜು, ಪೆÇ್ರ. ರಾಜಕುಮಾರ್, ಕೆ.ಪಿ. ರುದ್ರಮುನಿಸ್ವಾಮಿ, ಹಳೆ ವಿದ್ಯಾರ್ಥಿ ಸಂಘದ ಖಜಾಂಚಿ ಕೆ.ಎಸ್. ಈಶ್ವರಯ್ಯ, ಕಾರ್ಯದರ್ಶಿ ಎಸ್. ಹನುಮಂತಪ್ಪ, ಹಾದಿಮನಿ ಶಿವಕುಮಾರ್ ಮತ್ತಿತರರಿದ್ದರು. ಈ ಸಂದರ್ಭದಲ್ಲಿ ಹಳೇ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದ ಹಳೆಯ ದಿನಗಳನ್ನು ಮೆಲುಕು ಹಾಕುತ್ತಾ ಈಗಿನ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ