ಅಭ್ಯರ್ಥಿಗಳ ಚುನಾವಣಾ ವೆಚ್ಚದ ಮೇಲೆ ಅಧಿಕಾರಿಗಳು ಕಟ್ಟುನಿಟ್ಟಿನ ನಿಗಾವಹಿಸಬೇಕು: ನೆಲಮಂಗಲ ವಿಧಾನಸಭಾ ಕ್ಷೇತ್ರಗಳ ಚುನಾವಣಾ ವೆಚ್ಚ ವೀಕ್ಷP ಎಸ್.ಬಿ.ಆಕಾಶಿ

ಬೆಂಗಳೂರು,ಮೇ1-ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ಅಭ್ಯರ್ಥಿಗಳ ಚುನಾವಣಾ ವೆಚ್ಚದ ಮೇಲೆ ಅಧಿಕಾರಿಗಳು ಕಟ್ಟುನಿಟ್ಟಿನ ನಿಗಾವಹಿಸಬೇಕೆಂದು ದೊಡ್ಡಬಳ್ಳಾಪುರ ಹಾಗೂ ನೆಲಮಂಗಲ ವಿಧಾನಸಭಾ ಕ್ಷೇತ್ರಗಳ ಚುನಾವಣಾ ವೆಚ್ಚ ವೀಕ್ಷಕರಾದ ಎಸ್.ಬಿ.ಆಕಾಶಿ ಸೂಚಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಚುನಾವಣಾ ನೋಡಲ್ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಚುನಾವಣಾ ಅಕ್ರಮ ತಡೆಯಲು ಹಾಗೂ ಮತದಾರರಿಗೆ ಕೊಡುವ ಉಡುಗೊರೆಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಚೆಕ್‍ಪೆÇೀಸ್ಟ್‍ನಲ್ಲಿ ಪೆÇಲೀಸರು ಹಾಗೂ ಚುನಾವಣಾಧಿಕಾರಿಗಳು ತಪಾಸಣೆ ಕಾರ್ಯವನ್ನು ಇನ್ನಷ್ಟು ಬಿಗಿಗೊಳಿಸಬೇಕು ಎಂದರು.

ಬ್ಯಾಂಕ್ ಖಾತೆ, ಎಟಿಎಮ್ ಗಳಲ್ಲಿ ನಡೆಯುವ ಹಣದ ವಹಿವಾಟುಗಳ ಮೇಲೆ, ಒಂದೇ ಖಾತೆಯಿಂದ ಹಲವಾರು ಖಾತೆಗಳಿಗೆ ಹಣ ವಿನಿಮಯವಾಗಿದ್ದಲ್ಲಿ ಅಂತಹ ಪ್ರಕರಣಗಳ ಮೇಲೂ ವಿಶೇಷ ನಿಗಾವಹಿಸಿ ವರದಿ ನೀಡಬೇಕು ಮತ್ತು ಮದ್ಯ,ಆಭರಣ ಅಂಗಡಿಗಳು ಸೇರಿದಂತೆ ವ್ಯಾಪಾರ ಅಂಗಡಿಗಳು ನಡೆಸುವ ಮಾರಾಟ ವಸ್ತುಗಳ ಮೇಲೆ ಸೂಕ್ಷ್ಮವಾಗಿ ಗಮನಹರಿಸಬೇಕೆಂದು ಹೇಳಿದರು.

ಹೊಸಕೋಟೆ ಹಾಗೂ ದೇವನಹಳ್ಳಿ ವಿಧಾನಸಭಾ ಕ್ಷೇತ್ರಗಳ ಚುನಾವಣಾ ವೆಚ್ಚ ವೀಕ್ಷಕರಾದ ಎಂ.ತಮೀಜ್ ವೆಂದನ್ ಅವರು ಮಾತನಾಡಿ, ಜಿಲ್ಲೆಯಲ್ಲಿ ನಡೆಯುವ ಅಭ್ಯರ್ಥಿಗಳ ಚುನಾವಣಾ ರ್ಯಾಲಿ, ಸಭೆ ಹಾಗೂ ಇನ್ನಿತರ ಕಾರ್ಯಕ್ರಮಗಳಲ್ಲಿ ಏರ್ಪಡಿಸುವ ಊಟದ ವ್ಯವಸ್ಥೆ ಮತ್ತು ಹೋಟೆಲ್‍ಗಳು, ಬಾರ್ ಮತ್ತು ರೆಸ್ಟೋರೆಂಟ್‍ಗಳ ಮೇಲೂ ನಿಗಾವಹಿಸಬೆಕೆಂದು ತಿಳಿಸಿದರು.

ಜಿಲ್ಲಾಧಿಕಾರಿ ಎಸ್.ಪಾಲಯ್ಯ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ್ ಗುಳೇದ, ಅಪರ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್, ಮುಖ್ಯ ಲೆಕ್ಕಾಧಿಕಾರಿ ಟಿ.ಆರ್.ಶೋಭಾ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಚುನಾವಣಾ ನೋಡಲ್ ಅಧಿಕಾರಿಗಳು ಉಪಸ್ಥಿತರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ