ದೇಶದ ವಿಕಾಸದಲ್ಲಿ ಕಾರ್ಮಿಕರ ಶ್ರಮ ಮುಖ್ಯ. ಸೂರ್ಯಕಾಂತ ನಾಗಮಾರಪಳ್ಳಿ

ಬೀದರ್, ಮೇ. 1- ದೇಶದ ಅಭಿವೃದ್ಧಿ ಕಾರ್ಯದಲ್ಲಿ ಕಾರ್ಮಿಕರ ಶ್ರಮ ಅತೀ ಮುಖ್ಯವಾಗಿದೆ ಎಂದು ಉತ್ತರ ಕರ್ನಾಟಕ ಕಟ್ಟಡ ನಿರ್ಮಾಣ ಮತ್ತು ಇತರೆ ಕೂಲಿ ಕಾರ್ಮಿಕರ ಟ್ರಸ್ಟ್ ರಾಜ್ಯಾಧ್ಯಕ್ಷ ಸೂರ್ಯಕಾಂತ ನಾಗಮಾರಪಳ್ಳಿ ಹೇಳಿದರು.

ಉತ್ತರ ಕರ್ನಾಟಕ ಕಟ್ಟಡ ನಿರ್ಮಾಣ ಮತ್ತು ಇತರೆ ಕೂಲಿ ಕಾರ್ಮಿಕರ ಟ್ರಸ್ಟ್ ವತಿಯಿಂದ ನಗರದಲ್ಲಿ ಸೋಮವಾರ
ನಡೆದ ಕಾರ್ಮಿಕ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಸೂರ್ಯಕಾಂತ ನಾಗಮಾರಪಳ್ಳಿ ಅವರು, ಕಾರ್ಮಿಕರು ಅತ್ಯಂತ ಶ್ರಮಜೀವಿಗಳು. ಅವರ ಅಭಿವೃದ್ಧಿಗೆ ಸರ್ಕಾರ ಯೋಜನೆಗಳು ಹಾಕಬೇಕು ಎಂದರು.

ಸಂಘದ ಜಿಲ್ಲಾಧ್ಯಕ್ಷ ರವೀಂದ್ರ ಕೊಳ್ಳೂರ್ ಅಧ್ಯಕ್ಷತೆ ವಹಿಸಿದ್ದರು. ಪ್ರಮುಖರಾದ ಹಾವಶೆಟ್ಟಿ ಪಾಟೀಲ್, ದಿಲೀಪ ನಿಟ್ಟೂರೆ, ಲಕ್ಷ್ಮಣ ಪ್ರಸಾದ, ದಿಲೀಪ ಧಬಾಲೆ, ಬಾಬುರಾವ ಮಾಳಗೆ, ರೋಬೆನ್ ಮನ್ನಳ್ಳಿ, ಶೋಭಾ ಗಾದಗಿ, ವಿಮಲಾಬಾಯಿ, ಜಗದೇವಿ ಭಾಗ್ಯವಂತಿ, ಅನಿತಾ ತೀರ್ಥಮ್ಮ ಇತರರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ