ನವದೆಹಲಿ, ಮೇ 1-ಇಂದು ಮೇ 1. ಕಾರ್ಮಿಕ ದಿನಾಚರಣೆ. ಈ ಸಂದರ್ಭದಲ್ಲಿ ಶ್ರಮಿಕ ವರ್ಗಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೇಗೌಡರು ಮತ್ತು ಡಾ.ಮನಮೋಹನ್ ಸಿಂಗ್ ಸೇರಿದಂತೆ ಅನೇಕ ಗಣ್ಯರು ಶುಭ ಕೋರಿದ್ದಾರೆ. ಕೇಂದ್ರದ ಸಚಿವರು, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ, ವಿವಿಧ ರಾಜಕೀಯ ಪಕ್ಷಗಳ ಧುರೀಣರು, ಕಮ್ಯೂನಿಸ್ಟ್ ಪಕ್ಷ ನಾಯಕರು ಕಾರ್ಮಿಕ ದಿನಾಚರಣೆ ಪ್ರಯುಕ್ತ ಶ್ರಮಿಕ ವರ್ಗದ ಸಾಧನೆಗಳ ಗುಣಗಾನ ಮಾಡಿದ್ದಾರೆ. ದೇಶದ ನಿರ್ಮಾಣದಲ್ಲಿ ಕಾರ್ಮಿಕ ಪಾತ್ರ ಮಹತ್ವದ್ದು, ಯಾವುದೇ ದೇಶದ ಪ್ರಗತಿಯಲ್ಲಿ ಶ್ರಮಿಕ ವರ್ಗದ ಕೊಡುಗೆ ಅಪಾರ ಎಂದು ಗಣ್ಯರು ಬಣ್ಣಿಸಿದ್ದಾರೆ.
ದೇಶದ ವಿವಿಧ ರಾಜ್ಯಗಳು ಮತ್ತು ಪ್ರಮುಖ ನಗರಗಳಲ್ಲಿ ಕಾರ್ಮಿಕರ ಸಭೆ, ರ್ಯಾಲಿ ಮೊದಲಾದ ಅರ್ಥಪೂರ್ಣ ಕಾರ್ಯಕ್ರಮಗಳು ನಡೆಯುತ್ತಿವೆ.