ಬೆಂಗಳೂರು,ಮೇ2-ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ ಜನಪರ ಅಭ್ಯರ್ಥಿಗಳನ್ನೇ ಆಯ್ಕೆ ಮಾಡಬೇಕೆಂದು ಆಮ್ ಆದ್ಮಿ ಪಕ್ಷ , ರಾಜ್ಯದ ಜನರಲ್ಲಿ ಮನವಿ ಮಾಡಿದೆ.
ಸುದ್ದಿಗೋಷ್ಟಿಯಲ್ಲಿ ಆಮ್ ಆದ್ಮಿ ಪಕ್ಷದ ಸಹ ಸಂಚಾಲಕ ಶಿವಕುಮಾರ್ ಕೆಂಗಲ್ರಾಯ ರಾಜ್ಯಾದ್ಯಂತ ನೀತಿಸಂಹಿತೆ ಉಲ್ಲಂಘಿಸಿ ಆಮಿಷಗಳನ್ನು ಒಡ್ಡಲಾಗುತ್ತಿದೆ. ಅಲ್ಲದೆ ಭಾವನಾತ್ಮಕವಾಗಿ ಜನರನ್ನು ಸೆಳೆಯುವ ಪ್ರಯತ್ನ ರಾಜಕೀಯ ಪಕ್ಷದಿಂದ ನಡೆಯತ್ತಿದ್ದು, ಈ ಬಗ್ಗೆ ಚುನಾವಣ ಆಯೋಗಕ್ಕೆ ದೂರು ಕೊಟ್ಟರೂ ಉಪಯೋಗವಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ರಾಷ್ಟ್ರೀಯ ಪಕ್ಷಗಳು ರೈತರ ಸಂಕಷ್ಟ, ಇತರ ಕಾರ್ಮಿಕರ ಸಂಕಷ್ಟ ನಿವಾರಣೆ, ಉದ್ಯೋಗ ಸೃಷ್ಟಿ, ಬೆಲೆ ಏರಿಕೆ ಬಗ್ಗೆ ಪರಿಣಾಮಕಾರಿ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.
ರಾಜಕೀಯ ಪಕ್ಷಗಳ ಭಾವನಾತ್ಮಕ ವಿಚಾರಗಳಿಗೆ ಒಳಗಾಗದೆ ಜಾಗೃತರಾಗಿ ಚುನಾವಣೆಯಲ್ಲಿ ಮತ ಯಾಚಿಸಬೇಕು ಎಂದರು.