ಹುಬ್ಬಳ್ಳಿ:ಮೇ-೨: ಪಕ್ಷದಲ್ಲಿ ಎಲ್ಲರೂ ಒಟ್ಟಾಗಿ ಇದ್ದರೆ ವಿಜಯೇಂದ್ರಗೆ ಟಿಕೆಟ್ ತಪ್ಪುತ್ತಿರಲಿಲ್ಲ; ಯಡಿಯೂರಪ್ಪ ಮಗನಿಗೆ ಟಿಕೆಟ್ ತಪ್ಪಿಸಿದವರು ಯಾರು ಹೇಳಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ನಮಗೆ ಉತ್ತರ ಕರ್ನಾಟಕ ಭಾಗದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂಧನೆ ಸಿಗುತ್ತಿದೆ. ನಮ್ಮ ಯೋಜನೆಗಳಿಗೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ನಾನು ಈ ಭಾಗದಲ್ಲಿ ಪ್ರಚಾರ ಮಾಡುತ್ತಿದ್ದೇನೆ. ಮಲ್ಲಿಕಾರ್ಜುನ ಖರ್ಗೆ, ಜಿ. ಪರಮೇಶ್ವರ, ಡಿ.ಕೆ. ಶಿವಕುಮಾರ್ ರಾಜ್ಯಾದ್ಯಂತ ಪ್ರಚಾರ ಮಾಡುತ್ತಿದ್ದಾರೆ. ನಾವೆಲ್ಲ ಒಟ್ಟಾಗಿ ಇದ್ದೇವೆ ಎಂದರು.
ಯಡಿಯೂರಪ್ಪ ಮಗನಿಗೆ ಟಿಕೆಟ್ ತಪ್ಪಿಸಿದವರು ಯಾರು ಹೇಳಲಿ. ಸಂತೋಷ, ಅನಂತಕುಮಾರ್, ಶೆಟ್ಟರ್, ಈಶ್ವರಪ್ಪ ಸೇರಿ ಟಿಕೆಟ್ ತಪ್ಪಿಸಿದ್ದಾರೆ. ವಿಜಯೇಂದ್ರ ವರುಣಾರಲ್ಲಿ ಮನೆ ಮಾಡಿ, ಒಂದು ತಿಂಗಳು ಪ್ರಚಾರ ಮಾಡಿದ್ದ. ಅಪ್ಪ ಹೇಳಿ, ಹೈಕಮಾಂಡ್ ಹೇಳಿ ಚುನಾವಣೆಗೆ ತಯಾರಿ ಮಾಡಿದ್ದ. ಯಡಿಯೂರಪ್ಪ ಪಕ್ಷದಲ್ಲಿ ಎಲ್ಲರೂ ಒಟ್ಟಾಗಿ ಇದ್ದರೆ ವಿಜಯೇಂದ್ರಗೆ ಟಿಕೆಟ್ ತಪ್ಪುತ್ತಿರಲಿಲ್ಲ. ಶೋಭಾಗೆ ಟಿಕೆಟ್ ಕೊಡಿಸಲು ಯಡಿಯೂರಪ್ಪಗೆ ಸಾಧ್ಯವಾಗಿಲ್ಲ ಎಂದು ವಾಗ್ದಾಳಿ ನಡೆಸಿದರು.
ಮೋದಿಯವರು ಲೋಕಸಭಾ ಚುನಾವಣೆಯಲ್ಲಿ ದೇವೇಗೌಡರಿಗೆ ವೃದ್ಧಾಶ್ರಮಕ್ಕೆ ಹೋಗಲು ಹೇಳಿದ್ದರು. ಈಗ ರಾಜಕೀಯ ಕಾರಣಕ್ಕೆ ದೇವೇಗೌಡರ ಬಗ್ಗೆ ಹೊಗಳುತ್ತಿದ್ದಾರೆ. ಇದೆಲ್ಲ ನೋಡಿದ್ರೆ ಜೆಡಿಎಸ್, ಬಿಜೆಪಿ ಹೊಂದಾಣಿಕೆ ಮಾಡಿಕೊಂಡಿರುವುದು ಸ್ಪಷ್ಟವಾಗಿ ಕಾಣುತ್ತೆ. ಬಿಜೆಪಿ ಮತ್ತು ಕಾಂಗ್ರೆಸ್ನವರು ಪರಸ್ಪರ ಆರೋಪ ಪ್ರತ್ಯಾರೋಪ ಮಾಡಲ್ಲ. ನಾನು ಜೆಡಿಎಸ್ ವಿರುದ್ಧ ಟೀಕೆ ಮಾಡುತ್ತೇನೆ. ಮೈಸೂರು ಭಾಗದಲ್ಲಿ ಓನ್ಲಿ ಜೆಡಿಎಸ್ ಮೇಲೆ ಅಟ್ಯಾಕ್ ಮಾಡುತ್ತೇನೆ ಎಂದರು.
karnataka assembly election,CM Siddaramaiah,Hubli