ಕೌಡ್ಯಾಳ ಪರ ಪ್ರಚಾರಕ್ಕಾಗಿ
ಔರಾದ್‍ಗೆ ರಾಹುಲ್ ಗಾಂಧಿ
ಬೀದರ್, ಮೇ 2- ಔರಾದ್ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ವಿಜಯಕುಮಾರ ಕೌಡ್ಯಾಳ ಪರÀ ಪ್ರಚಾರ ಮಾಡಲು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮೇ 3ರ ಗುರುವಾರ ಆಗಮಿಸುತ್ತಿದ್ದಾರೆ.
ಮೇ 3 ರಂದು ಬೆಳಗ್ಗೆ 9ಕ್ಕೆ ನವ ದೆಹಲಿಯಿಂದ ವಿಶೇಷ ವಿಮಾನ ಮೂಲಕ ಹೊರಟು ಬೆಳಗ್ಗೆ 11.30ಕ್ಕೆ ಬೀದರ್‍ನ ವಾಯು ನೆಲೆಗೆ ಆಗಮಿಸಲಿದ್ದಾರೆ. ಅಲ್ಲಿಂದ ಹೆಲಿಕ್ಯಾಪ್ಟರ್ ಔರಾದ್ ತಲುಪಿ ಅಲ್ಲಿನ ಮಿನಿ ವಿಧಾನಸೌಧ ಬಳಿ ಮಧ್ಯಾಹ್ನ 12.20ಕ್ಕೆ ನಡೆಯುವ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ರಾಹುಲ್ ಮಾತನಾಡಲಿದ್ದಾರೆ.
ಕಾರ್ಯಕ್ರಮಕ್ಕೆ ಕಾಂಗ್ರೆಸ್‍ನ ಜಿಲ್ಲಾ, ತಾಲೂಕು ಘಟಕದ ಪದಾಧಿಕಾರಿಗಳು, ಕಾರ್ಯಕರ್ತರು,
ಪಕ್ಷದ ಚುನಾಯಿತ ಪ್ರತಿನಿಧಿಗಳು, ಪಕ್ಷದ ಬೆಂಬಲಿಗರು, ಹಿತೈಷಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಕಾಂಗ್ರೆಸ್ ಅಭ್ಯರ್ಥಿ ವಿಜಯಕುಮಾರ ಕೌಡಾಳ ಮನವಿ ಮಾಡಿದ್ದಾರೆ.
ಔರಾದ್ ಕ್ಷೇತ್ರಕ್ಕೆ ಪಕ್ಷದ ಮುಖ್ಯಸ್ಥ ರಾಹುಲ್ ಗಾಂಧಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕ್ಷೇತ್ರದ ಮುಖಂಡರು, ಕಾರ್ಯಕರ್ತರಿಗೆ ಆನೆ ಬಲ ಬಂದಂತೆ. ರಾಹುಲ್ ಗಾಂಧಿ ಆಗಮನದಿಂದ ಬಿಜೆಪಿಗೆ ನಡುಕ ಶುರುವಾಗಿದೆ. ಔರಾದ್‍ನಲ್ಲಿ ಕಾಂಗ್ರೆಸ್ ಗೆಲುವು ಖಚಿತ ಎಂದು ಅಭ್ಯರ್ಥಿ ವಿಜಯಕುಮಾರ ಕೌಡಾಳ ವಿಶ್ವಾಸ ವ್ಯಕ್ತಪಡಿಸಿದ್ದಾರೆ.