ಕಾಂಗ್ರೆಸ್ ಮುಕ್ತ ಕರ್ನಾಟಕ್ ನಿರ್ಮಾಣಕ್ಕಾಗಿ ಬಿಜೆಪಿಗೆ ಮತ ನೀಡಿ: ಸಿಎಂ ಯೋಗಿ ಆದಿತ್ಯನಾಥ್

Uttar Pradesh state Chief Minister Yogi Adityanath, center, waves as he joins a rally led by Bharatiya Janata Party (BJP) Kerala state president Kummanam Rajasekharan, left, at Keechari in Kannur, India, Wednesday, Oct. 4, 2017. The rally that began Tuesday in northern Kerala is expected to pass through the state to capital Thiruvananthapuram in south. (AP Photo/S.K.Mohan)

ಶಿರಸಿ:ಮೇ-3: ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಕಾಂಗ್ರೇಸ್ ಪಕ್ಷದ ಎಟಿಎಂ ಆಗಿದ್ದಾರೆ. ಸಿಎಂ ಸಿದ್ದರಾಮಯ್ಯ ಸರ್ಕಾರ ಲೂಟಿ ಹೊಡೆಯುವುದನ್ನು ತಪ್ಪಿಸಲು ಕಾಂಗ್ರೆಸ್ ಮುಕ್ತ ಕರ್ನಾಟಕ ನಿರ್ಮಾಣ ಮಾಡಬೇಕಿದೆ ಹೀಗಾಗಿ ಬಿಜೆಪಿಗೆ ಮತ ನೀಡುವಂತೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಕರೆ ನೀಡಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ ಪ್ರಚಾರಕ್ಕೆ ಆಗಮಿಸಿದ ಯೋಗಿ ಆದಿತ್ಯನಾಥ್, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಕರ್ನಾಟಕದಲ್ಲಿ ಭ್ರಷ್ಟಾಚಾರ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಇದ್ದಾರೆ. ಸಿದ್ದರಾಮಯ್ಯ ಸರ್ಕಾರದಿಂದ ಭಯೋತ್ಪಾದಕರಿಗೆ ಬೆಂಬಲ ನೀಡಲಾಗುತ್ತಿದೆ. ಉತ್ತರ ಪ್ರದೇಶ ಸರ್ಕಾರ ಜಿಹಾದಿಗಳನ್ನ ನಿಯಂತ್ರಣಕ್ಕೆ ತಂದಿದೆ. ಕರ್ನಾಟಕದಲ್ಲಿ ಸಾಕಷ್ಟು ಹಿಂದು ಕಾರ್ಯಕರ್ತರ ಹತ್ಯೆಯಾಗಿದೆ. ಆದರೆ ಇಲ್ಲಿನ ‌ಸರ್ಕಾರ ಹಿಂದು ಕಾರ್ಯಕರ್ತರ ಹತ್ಯೆ ಮಾಡಿದವರ ಜೊತೆ ಹೊಂದಾಣಿಕೆ ಮಾಡಿಕೊಂಡು ಹೋಗಿದೆ.

ಕರ್ನಾಟಕದಲ್ಲಿ ಸಾಕಷ್ಟು ರೈತರು ಆತ್ಮಹತ್ಯೆ ಮಾಡಿಕೊಂಡರು ಉತ್ತರ ಪ್ರದೇಶದಲ್ಲಿ ೨೩ ಕೋಟಿ ಜನರಿದ್ದರು ರೈತರು ಆತ್ಮಹತ್ಯೆ ಮಾಡಿಕೊಳ್ಳಿತ್ತಿಲ್ಲ. ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ತಂದರೆ ರೈತರ ಆತ್ಮಹತ್ಯೆ ನಿಲ್ಲುತ್ತದೆ. ಉತ್ತರ ಪ್ರದೇಶದಲ್ಲಿ ೮೬ ಲಕ್ಷ ರೈತ ಸಾಲ ಮನ್ನಾ ಮಾಡಿದ್ದೇವೆ. ಆದರೆ ಕರ್ನಾಟಕದಲ್ಲಿ ಯಾಕೆ ಸಾಲ ಮನ್ನಾ ಮಾಡಲು ಸಾಧ್ಯವಾಗಲಿಲ್ಲ ಎಂದು ಪ್ರೆಶ್ನಿಸಿದರು.

ಕರ್ನಾಟಕದಲ್ಲಿ ಯಡಿಯೂರಪ್ಪ ನೇತೃತ್ವದ ಸರ್ಕಾರ ಬರಲು ಭಾರತೀಯ ಜನತಾ ಪಕ್ಷಕ್ಕೆ ಬೆಂಬಲಿಸಿ. ಬಿಜೆಪಿ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದರೆ ಹಿಂದು ಕಾರ್ಯಕರ್ತರ ಹತ್ಯೆ ನಿಲ್ಲುತ್ತದೆ. ಜಿಹಾದಿಗಳನ್ನ ನಿಯಂತ್ರಣ ಬಿಜೆಪಿ ಸರ್ಕಾರದಿಂದ ಮಾಡಲಾಗುತ್ತದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ