ಬೆಂಗಳೂರು ,ಮೇ4-ರಾಷ್ಟ್ರೀಕೃತ ಹಾಗೂ ಸಹಕಾರಿ ಸಂಘಗಳಲ್ಲಿನ ಒಂದು ಲಕ್ಷದವರೆಗೆ ರೈತರ ಬೆಳೆ ಸಾಲ ಮನ್ನಾ , 20 ಲಕ್ಷ ಸಣ್ಣ ಹಾಗೂ ಅತಿಸಣ್ಣ ರೈತರಿಗೆ 10 ಸಾವಿರ ಆರ್ಥಿಕ ನೆರವು, ರೈತರ ಪಂಪ್ಸೆಟ್ಗಳಿಗೆ 10 ಗಂಟೆಗಳ ಕಾಲ ತ್ರಿಫೇಸ್ ವಿದ್ಯುತ್ ಪೂರೈಕೆ,ಸ್ತ್ರೀ ಶಕ್ತಿ ಹಾಗೂ ಸ್ವಸಹಾಯ ಸಂಘಗಳ ಮಹಿಳೆಯರಿಗೆ ಶೇ.1ರ ಬಡ್ಡಿ ದರದಲ್ಲಿ ಎರಡು ಲಕ್ಷ ಸಾಲ,ಬಿಪಿಎಲ್ ಕುಟುಂಬದ ಮಹಿಳೆಯರಿಗೆ ಉಚಿತ ಸ್ಮಾರ್ಟ್ಫೆÇೀನ್ ಸೇರಿದಂತೆ ಹತ್ತು ಹಲವು ಭರವಸೆಗಳನ್ನೊಳಗೊಂಡ ಬಿಜೆಪಿ ಪ್ರಣಾಳಿಕೆ ಬಿಡುಗಡೆಯಾಗಿದೆ.
ನಮ್ಮ ಕರ್ನಾಟಕಕ್ಕೆ ನಮ್ಮ ವಚನ ಎಂಬ ಘೋಷ ವಾಕ್ಯದಡಿ ಸಿದ್ದಪಡಿಸಲಾಗಿರುವ ಈ ಪ್ರಣಾಳಿಕೆಯಲ್ಲಿ ಮುಂದಿನ 5 ವರ್ಷ ಕರ್ನಾಟಕದ ಸರ್ವಾಂಗೀಣ ಅಭಿವೃದ್ದಿ ಒಳಗೊಂಡ ಮುನ್ನೋಟಗಳನ್ನು ಅಳವಡಿಸಲಾಗಿದೆ.
ಕಾಲಮಿತಿಯೊಳಗೆ ಈಡೇರಿಸಬಹುದಾದ ಭರವಸೆಗಳನ್ನು ಮಾತ್ರ ಘೋಷಣೆ ಮಾಡಲಾಗಿದ್ದು , ಮುಖ್ಯವಾಗಿ ನಾಡಿನ ಅನ್ನದಾತನ ಬದುಕನ್ನು ಹಸನು ಮಾಡುವುದು, ಮಹಿಳೆಯರ ಸಬಲೀಕರಣ,ಮಹಿಳೆಯರು ಮತ್ತು ಸ್ತ್ರೀ ಶಕ್ತಿ ಸಂಘಟನೆಗಳ ಸಬಲೀಕರಣ, ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲೂ ವೈದ್ಯಕೀಯ ಕಾಲೇಜುಗಳ ಸ್ಥಾಪನೆ, ಯುವಕರಿಗೆ ಉದ್ಯೋಗಾವಕಾಶ ಸೇರಿದಂತೆ ಹಲವು ರೀತಿಯ ಭರವಸೆಗಳನ್ನು ನೀಡಲಾಗಿದೆ.
ಖಾಸಗಿ ಹೋಟೆಲ್ನಲ್ಲಿ ನಡೆದ ಸಮಾರಂಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ , ರಾಜ್ಯ ಬಿಜೆಪಿ ಉಸ್ತುವಾರಿ ಮುರುಳೀಧರ್ ರಾವ್, ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವ್ಡೇಕರ್, ವಿಧಾನಸಭೆಯ ಪ್ರತಿಪಕ್ಷದ ನಾಯಕ ಜಗದೀಶ್ ಶೆಟ್ಟರ್, ಸಂಸದ ಪಿ.ಸಿ.ಮೋಹನ್ ಸೇರಿದಂತೆ ಮತ್ತಿತರ ಮುಖಂಡರು ಪ್ರಣಾಳಿಕೆ ಬಿಡುಗಡೆ ಮಾಡಿದರು.
ಇದಕ್ಕೂ ಮುನ್ನ ಶಾಸಕ ವಿಜಯಕುಮಾರ್ ನಿಧನಕ್ಕೆ ಸಂತಾಪ ಸೂಚಿಸಲಾಯಿತು. ಒಟ್ಟು 58 ಪುಟಗಳ ಪ್ರಣಾಳಿಕೆಯಲ್ಲಿ ಕರ್ನಾಟಕದ ಸಮಗ್ರ ದೃಷ್ಟಿಕೋನವನ್ನು ಬಿಂಬಿಸುವ ಕಾರ್ಯಕ್ರಮಗಳಿಗೆ ಒತ್ತು ನೀಡಲಾಗಿದೆ.
ನಂತರ ಮಾತನಾಡಿದ ಬಿ.ಎಸ್.ಯಡಿಯೂರಪ್ಪ ರಾಷ್ಟ್ರೀಕೃತ ಬ್ಯಾಂಕುಗಳು ಸಾಲ ಮನ್ನಾ ಮಾಡುವಂತೆ ಹೋದಲ್ಲೆಲ್ಲಾ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿ ಬೊಬ್ಬೆ ಹೊಡೆಯುತ್ತಿದ್ದಾರೆ. ಆದರೆ ನಾವು ಅಧಿಕಾರಕ್ಕೆ ಬಂದ ಕೂಡಲೇ ಕೇಂದ್ರದ ಕಡೆ ನೋಡದೆ ರಾಷ್ಟ್ರೀಕೃತ ಬ್ಯಾಂಕ್ಗಳ 1 ಲಕ್ಷದವರೆಗಿನ ರೈತರ ಸಾಲ ಮನ್ನಾ ಮಾಡಿ ಆದೇಶ ಹೊರಡುಸುತ್ತೇವೆ. ಜೊತೆಗೆ ಸಹಕಾರಿ ಸಂಘದ ಸಾಲ ಮನ್ನಾವನ್ನು 50 ಸಾವಿರದಿಂದ 1 ಲಕ್ಷಕ್ಕೆ ಹೆಚ್ಚಳ,ಮೂರು ತಿಂಗಳೊಳಗೆ ನೇಕಾರರ 1 ಲಕ್ಷದವರೆಗಿನ ಸಾಲವನ್ನೂ ಮನ್ನಾ ಮಾಡುವುದಾಗಿ ಪ್ರಕಟಿಸಿದರು.
ರಾಜ್ಯದ 224 ಕ್ಷೇತ್ರಗಳ ಪ್ರವಾಸದ ವೇಳೆ ಕಂಡು ಬಂದ ಸಮಸ್ಯೆಗಳನ್ನು ಕ್ರೂಢೀಕರಿಸಿ ಪ್ರಣಾಳಿಕೆ ಸಿದ್ಧಪಡಿಸಿದ್ದೇವೆ. ಅದನ್ನು ಗೌರವದಿಂದ ನಾಡಿನ ಜನತೆಗೆ ಅರ್ಪಣೆ ಮಾಡುತ್ತಿದ್ದೇವೆ. ಮುಂದಿನ 5 ವರ್ಷ ರಾಜ್ಯದ ಅಭಿವೃದ್ಧಿಗೆ ಪೂರಕ ರೀತಿಯಲ್ಲಿ ಪ್ರಣಾಳಿಕೆ ಸಿದ್ಧಪಡಿಸಿದ್ದೇವೆ. ಜನರ ಆಶೋತ್ತರ ತಿಳಿದು ಪ್ರಣಾಳಿಕೆ ಸಿದ್ಧಪಡಿಸಲಾಗಿದೆ. ಮೋದಿಯವರ ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುವ ಮಾರ್ಗಸೂಚಿ ಇದಾಗಿದೆ ಎಂದು ಪ್ರಣಾಳಿಕೆಯನ್ನು ಸಮರ್ಥಿಸಿಕೊಂಡರು.
ಇದು ಈಡೇರಿಸಲಾಗದ ಭರವಸೆಯ ಪಟ್ಟಿ ಅಲ್ಲ, ನಮ್ಮನ್ನು ಜನ ಅಧಿಕಾರಕ್ಕೆ ತರುವುದು ಖಚಿತ, ಹಾಗಾಗಿ ಇದು ಹಣಕಾಸು ವಿವರ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕರ್ನಾಟಕದ ಯುವ ಜನತೆ ಭವಿಷ್ಯ, ಸರ್ವರಿಗೂ ಸಮಪಾಲು ಸಮಬಾಳು ಸಾಮಾಜಿಕ ನ್ಯಾಯ, ಮಕ್ಕಳ ಶಿಕ್ಷಣಕ್ಕೆ ಕಾಯಕಲ್ಪ, ಆರೋಗ್ಯ ಕರ್ನಾಟಕ, ಮೂಲಸೌಕರ್ಯ ವಿಸ್ತರಣೆ, ಆರ್ಥಿಕ ಔದ್ಯೋಗಿಕ ವಿಸ್ತರಣೆ, ನವ ಭಾರತಕ್ಕಾಗಿ ನವ ಬೆಂಗಳೂರು ಸೇರಿದಂತೆ ಹತ್ತು ಹಲವು ಅಂಶ ಒಳಗೊಂಡ ಪ್ರಣಾಳಿಕೆ ಇದಾಗಿದೆ. ಸರ್ಕಾರ ಬದಲಿಸಿ ಬಿಜೆಪಿ ಗೆಲ್ಲಿಸಿ ಉದ್ದೇಶದೊಂದಿಗೆ ಪ್ರಣಾಳಿಕೆ ರಚಿಸಲಾಗಿದೆ ಎಂದರು.
ಸರ್ಕಾರಿ ಕಾಲೇಜುಗಳಲ್ಲಿ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ, ಅಮರಶಿಲ್ಪಿ ಜಕಣಾಚಾರಿ ಜಯಂತಿ ಆಚರಣೆ, ಬಿಪಿಎಲ್ ಕುಟುಂಬದ ಮಹಿಳೆಯರಿಗೆ ಉಚಿತ ನ್ಯಾಪ್ಕಿನ್ ವಿತರಣೆ, ಜಿಲ್ಲಾ ಕೇಂದ್ರದಲ್ಲಿ 2, ತಾಲೂಕಿನಲ್ಲಿ 1 ಅನ್ನಪೂರ್ಣ ಕ್ಯಾಂಟಿನ್ ಆರಂಭ, ರೇಷ್ಮೆ ಬೆಳೆಗಾರರಿಗೆ 75 ಸಾವಿರದಿಂದ 1 ಲಕ್ಷದವರೆಗೆ ಸಬ್ಸಿಡಿ, ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆ ಜಾರಿ, ಪ್ರತಿ ಮನೆಗೆ ಸೌಭಾಗ್ಯ ಯೋಜನೆಯಡಿ ವಿದ್ಯುತ್, ಮಂಗಳೂರಿನಲ್ಲಿ ಎನ್ಐಎ ತನಿಖಾ ಸಂಸ್ಥೆ ಸ್ಥಾಪನೆ, ಬೆಂಗಳೂರಿನಲ್ಲಿ ಸಂಕಷ್ಟದಲ್ಲಿರುವ ಮಹಿಳೆಯರಿಗಾಗಿ ಕಿತ್ತೂರು ರಾಣಿ ಚೆನ್ನಮ್ಮ ಫ್ಲೈಯಿಂಗ್ ಸ್ಕ್ವಾಡ್ ರಚನೆ, ಎಲ್ಲ ಜಿಲ್ಲೆಗಳಲ್ಲಿ ಲಾಲ್ಬಾಗ್ ಮಾದರಿ ಉದ್ಯಾನವನ ರಚನೆ, ದೇವನಹಳ್ಳಿಯಲ್ಲಿ ಡಾ.ರಾಜ್ಕುಮಾರ್ ಮೆಗಾಫಿಲಂ ಸಿಟಿ ಸ್ಥಾಪನೆ, ಎಟಿಎಂ ಇಲ್ಲದ ಗ್ರಾಮಗಳಲ್ಲಿ ಎಟಿಎಂ ಸ್ಥಾಪನೆ ಸೇರಿದಂತೆ ಹಲವಾರು ಮಹತ್ವದ ಯೋಜನೆಗಳನ್ನು ಬಿಜೆಪಿಯಿಂದ ಘೋಷಿಸಲಾಯಿತು.
ಬೆಂಗಳೂರಿನಲ್ಲಿ ಕರ್ನಾಟಕ ಫೆÇ್ಲರೆನ್ಸಿಕ್ ಸೈನ್ಸ್ ಯೂನಿವರ್ಸಿಟಿ ಸ್ಥಾಪನೆ ಮತ್ತು ಅದರ ಭಾಗವಾಗಿ ವಿಶ್ವದರ್ಜೆಯ ಸೈಬರ್ ಫೆÇ್ಲರೆನ್ಸಿಕ್ ಪ್ರಯೋಗಾಲಯ ನಿರ್ಮಾಣ, ಮೈಸೂರು, ಧಾರವಾಡ, ಕಲಬುರಗಿ ಮತ್ತು ಮಂಗಳೂರಿನಲ್ಲಿ ನಾಲ್ಕು ಹೊಸ ಸೈಬರ್ ಫೆÇ್ಲರೆನ್ಸಿಕ್ ಪ್ರಯೋಗಾಲಯಗಳ ಸ್ಥಾಪನೆ ಸೇರಿದಂತೆ ಕಾನೂನು ಸುವ್ಯವಸ್ಥೆಗೆ ಹತ್ತು-ಹಲವು ದಿಟ್ಟ ಕ್ರಮಗಳನ್ನು ಕೈಗೊಳ್ಳುವುದಾಗಿ ಪ್ರಣಾಳಿಕೆಯಲ್ಲಿ ಹೇಳಲಾಗಿದೆ.