ಮತದಾನದಂದು ಮತದಾರರ ಎಡಗೈ ತೋರು ಬೆರಳಿಗೆ ಶಾಹಿ; ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‍ಕುಮಾರ್

ಬೆಂಗಳೂರು, ಮೇ 4- ರಾಜ್ಯ ವಿಧಾನಸಭೆ ಚುನಾವಣೆ ಮತದಾನದಂದು ಮತದಾರರ ಎಡಗೈ ತೋರು ಬೆರಳಿಗೆ ಶಾಹಿ ಹಾಕಲಾಗುತ್ತದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‍ಕುಮಾರ್ ತಿಳಿಸಿದರು.

ರಾಜ್ಯ ವಿಧಾನಸಭೆ ಚುನಾವಣೆಗೆ ಮೇ 12ರಂದು ಮತದಾನ ನಡೆಯಲಿದ್ದು, ಅಂದು ಮತ ಚಲಾಯಿಸುವ ಪ್ರತಿಯೊಬ್ಬ ಮತದಾರರಿಗೂ ಮತಗಟ್ಟೆಗಳಲ್ಲಿ ಎಡಗೈ ತೋರು ಬೆರಳಿಗೆ ಶಾಹಿ ಹಾಕಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ವಿಧಾನಸಭೆ ಚುನಾವಣೆ ಮತದಾನದ ದಿನಾಂಕ ಹತ್ತಿರವಾಗುತ್ತಿದೆ. ಜತೆಗೆ ಚುನಾವಣೆ ಪ್ರಚಾರವೂ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಪ್ರತಿಯೊಂದು ವಿಧಾನಸಭೆ ಕ್ಷೇತ್ರಗಳಲ್ಲಿ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗುತ್ತದೆ. ಆದರೆ, ಅದನ್ನು ಬಹಿರಂಗಪಡಿಸುವುದಿಲ್ಲ ಎಂದರು.

ರಾಜಕೀಯ ಪಕ್ಷಗಳ ಅಭಿಪ್ರಾಯ ಹಾಗೂ ಚುನಾವಣಾ ವೀಕ್ಷಕರ ಅಭಿಪ್ರಾಯ ಪಡೆದು ಆಯಾ ಕ್ಷೇತ್ರದ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾ ಜಿಲ್ಲಾ ಚುನಾವಣಾಧಿಕಾರಿಗಳು ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಮತಕ್ಷೇತ್ರಗಳನ್ನು ಗುರುತಿಸಲಿದ್ದಾರೆ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ