ಸೂಭಾಷ ಕಲ್ಲೂರ್ ಪ್ರಚಾರ ಜೋರು ಅಭಿವೃದ್ಧಿಗಾಗಿ ಬಿಜೆಪಿಗೆ ಬೆಂಬಲಿಸಿ

ಸೂಭಾಷ ಕಲ್ಲೂರ್ ಪ್ರಚಾರ ಜೋರು
ಅಭಿವೃದ್ಧಿಗಾಗಿ ಬಿಜೆಪಿಗೆ ಬೆಂಬಲಿಸಿ
ಬೀದರ್, ಮೇ 4- ಹುಮನಾಬಾದ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುಭಾಷ ಕಲ್ಲೂರ್ ಪ್ರಚಾರ ಮತ್ತಷ್ಟು ಚುರುಕುಗೊಳಿಸಿದ್ದಾರೆ. ಪಟ್ಟಣ ಸೇರಿ ವಿವಿಧ ಗ್ರಾಮಗಳಲ್ಲಿ ಪಾದಯಾತ್ರೆ ನಡೆಸಿ ಮತದಾರರ ಮನವೊಲಿಕೆ ಕಸರತ್ತು ನಡೆಸಿದರು.

ಕ್ಷೇತ್ರದ ಜನರ ಸೇವೆ ಉz್ದÉೀಶದಿಂದ ಚುನಾವಣೆಗೆ ನಿಂತಿz್ದÉೀನೆ. ಜನತೆ ಆಶೀರ್ವದಿಸಿದರೆ ಕ್ಷೇತ್ರಕ್ಕೆ ಮಾದರಿ ಮಾಡಿ ತೋರಿಸುವೆ ಎಂದು ಸುಭಾಷ ಕಲ್ಲೂರ್ ಹೇಳಿದರು.

ಈ ಸಲ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ರಾಜ್ಯ ಅಭಿವೃದ್ಧಿಯಲ್ಲಿ ಹೊಸ ಪರ್ವ ಶುರುವಾಗಲಿದೆ. ಕ್ಷೇತ್ರದ ಮತದಾರರು ನನಗೆ ಆಶೀರ್ವದಿಸಬೇಕು. ಕ್ಷೇತ್ರದ ವಿಕಾಸದ ದೃಷ್ಟಿಯಿಂದ ನನಗೆ ಅವಕಾಶ ಕೊಡಿ ಎಂದು ಮನವಿ ಮಾಡಿದರು.

ಕ್ಷೇತ್ರದಲ್ಲಿ ಈ ಬಾರಿ ಜನ ಪರಿವರ್ತನೆ ಬಯಸಿದ್ದಾರೆ. ಕಾಂಗ್ರೆಸ್, ಜೆಡಿಎಸ್‍ಗೆ ತಕ್ಕ ಪಾಠ ಕಲಿಸಬೇಕಾಗಿದೆ. ಅಧಿಕಾರಕ್ಕೆ ಬರುವ ಬಿಜೆಪಿಗೆ ಬೆಂಬಲಿಸುವ ಮೂಲಕ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದರು.

ಪ್ರಮುಖರಾದ ಶಿವಾನಂದ ಮಂಠಾಳಕರ್, ಗುಂಡುರೆಡ್ಡಿ, ಬ್ಯಾಂಕರೆಡ್ಡಿ, ಸೋಮನಾಥ ಪಾಟೀಲ್, ಬಸವರಾಜ ಆರ್ಯ, ಮಲ್ಲಿಕಾರ್ಜುನ, ಓಂಕಾರ ತುಂಬಾ ಇತರರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ