ಪ್ರಧಾನಿ ಮೋದಿಯವರನ್ನು ಭೇಟಿಯಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ಪತ್ನಿ ಅಶ್ವಿನಿ

ಬೆಂಗಳೂರು:ಮೇ-4: ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಪರ ಪ್ರಚಾರಕ್ಕೆ ರಾಜ್ಯಕ್ಕೆ ಆಗಮಸಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಜತೆ ಭೇಟಿಯಾದರು.

ಈ ಬಗ್ಗೆ ಫೇಸ್ ಬುಕ್ ನಲ್ಲಿ ಫೋಟೋ ಹಾಕಿ ತಮ್ಮ ಸಂತಸ ಹಂಚಿಕೊಂಡಿರುವ ಪುನೀತ್ ರಾಜ್ ಕುಮಾರ್ ಅಭಿಮಾನಿಗಳ ಕ್ಲಬ್ ಪುಟದಲ್ಲಿ ಅವರು ಮೋದಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವುದನ್ನು ಪ್ರಸ್ತಾಪಿಸಲಾಗಿದೆ.

ಇದೇ ವೇಳೆ ಡಾ ರಾಜ್ ಕುಮಾರ್ ಅವರ ಬಗ್ಗೆ ಪುನೀತ್ ರಾಜ್ ಕುಮಾರ್ ಬರೆದಿರುವ ‘ವ್ಯಕ್ತಿತ್ವದ ಹಿಂದಿರುವ ವ್ಯಕ್ತಿ’ (person behind the personality) ಪುಸ್ತಕವನ್ನ ಪ್ರಧಾನಿಗೆ ಉಡುಗೊರೆಯಾಗಿ ನೀಡಿ ಗೌರವಿಸಿದ್ದಾರೆ.

ಪುನೀತ್ ರಾಜ್ ಕುಮಾರ್ ಈ ಬಾರಿಯ ರಾಜ್ಯ ವಿಧಾನಸಭೆ ಚುನಾವಣೆಯ ಚುನಾವಣಾ ಆಯೋಗದ ರಾಯಭಾರಿ ಆಗಿದ್ದಾರೆ.

Puneet Rajkumar,Meet,PM Narendra Modi

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ