ಎಸ್ಸಿ, ಎಸ್ಟಿ ಅಧಿಕಾರಿಗಳು ಮತ್ತು ನೌಕರರಿಗೆ ಮನಸೋಇಚ್ವೆ ಹಿಂಬಡ್ತಿ: ಸಂಸದರ ಮನೆಗಳಿಗೆ ಮುತ್ತಿಗೆ ಎಚ್ಚರಿಕೆ

ಬೆಂಗಳೂರು, ಮೇ 5-ಬಡ್ತಿ ವಿಷಯದಲ್ಲಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ನೆಪವಾಗಿಟ್ಟುಕೊಂಡು ಎಸ್ಸಿ, ಎಸ್ಟಿ ಅಧಿಕಾರಿಗಳು ಮತ್ತು ನೌಕರರಿಗೆ ಮನಸೋಇಚ್ವೆ ಹಿಂಬಡ್ತಿ ನೀಡುತ್ತಿರುವುದನ್ನು ಖಂಡಿಸಿ ಸಂಸದರ ಮನೆಗಳಿಗೆ ಮುತ್ತಿಗೆ ಹಾಕಲಾಗುವುದು ಎಂದು ಎಸ್ಸಿ,ಎಸ್ಟಿ ಗುತ್ತಿಗೆ ನೌಕರರ ಸಂಘದ ಅಧ್ಯಕ್ಷ ಎನ್.ಮಹದೇವಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂವಿಧಾನವನ್ನು ಗಾಳಿಗೆ ತೂರಿ ಅವೈಜ್ಞಾನಿಕವಾಗಿ ಜ್ಯೇಷ್ಠತಾ ಪಟ್ಟಿ ಸಿದ್ದಪಡಿಸಲಾಗುತ್ತಿದೆ. ಇದರಿಂದಾಗಿ ಎಸ್ಸಿ,ಎಸ್ಟಿ ನೌಕರರಿಗೆ ಅನ್ಯಾಯವಾಗುತ್ತಿದೆ. ಮುಂಬಡ್ತಿಯಾದ ಕೆಲವರು ಆಘಾತಕ್ಕೊಳಗಾಗಿದ್ದಾರೆ. ಚಿತ್ರದುರ್ಗದ ಎಇಇ ಲಿಂಗಾರಾಜು ಮುಂಬಡ್ತಿಯಾಗಿದ್ದಕ್ಕಾಗಿ ಹೃದಯಘಾತದಿಂದ ಪ್ರಾಣ ಕಳೆದಿಕೊಂಡಿದ್ದಾರೆ. ಮುಂಡಗೋಡಿನ ಅಧಿಕಾರಿ ಜಗದೀಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಬಡ್ತಿ ಮೀಸಲಾತಿ ವಿಷಯದಲ್ಲಿ ರಾಜ್ಯ ಸರ್ಕಾರ ಕಾನೂನಿಗೆ ರಾಜ್ಯಪಾಲರು ಅಂಗೀಕಾರ ನೀಡಲಿಲ್ಲ. ಅದು ಇನ್ನೂ ರಾಷ್ಟ್ರಪತಿ ಅವರ ಅಂಕಿತಕ್ಕೆ ಹೋಗಿದೆ. ಕೇಂದ್ರ ಸರ್ಕಾರ ಅನಗತ್ಯವಾಗಿ ವಿಳಂಬ ಮಾಡುತ್ತಿರುವುದರಿಂದ ಸಮಸ್ಯೆ ಸೃಷ್ಟಿಯಾಗಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ