ಗೆಲುವು ನನ್ನದೇ ಇದರಲ್ಲಿ ಯಾವುದೇ ಸಂಶಯವಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾದಾಮಿ,ಮೇ.5- ಗೆಲುವು ನನ್ನದೇ ಇದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಅಭ್ಯರ್ಥಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನಗರದಲ್ಲಿಂದು ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಅವರು, ಅಧಿಕ ಮತಗಳಿಂದ ಗೆಲ್ಲುತ್ತೇನೆ, ಕ್ಷೇತ್ರದ ಜನತೆ ನನ್ನ ಜೊತೆ ಇದ್ದಾರೆ ಎಂದರು.

ಜೆಡಿಎಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು, ಸುಳ್ಳು ಹೇಳುವುದರಲ್ಲಿ ಹೆಚ್.ಡಿ.ಕುಮಾರಸ್ವಾಮಿ ನಿಸ್ಸೀಮರು ಎಂದು ಅವರು ತಿಳಿಸಿದರು.
ಬಿಜೆಪಿ, ಜೆಡಿಎಸ್ ಸಮಬಲದ ಹೋರಾಟದಿಂದ ಅವರು ರಾಜ್ಯದಲ್ಲಿ ಮಾತ್ರ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಸ್ಪಷ್ಟಪಡಿಸಿದ ಅವರು, ಬಿಜೆಪಿ ಹಾಗೂ ಜೆಡಿಎಸ್ ಬಡವರ ದೀನದಲಿತರ ಬಗ್ಗೆ ಎಳ್ಳಷ್ಟೂ ಕಾಳಜಿ ಇಲ್ಲ ಎಂದು ಹೇಳಿದರು.

ಉರಿ ಬಿಸಿಲನ್ನು ಲೆಕ್ಕಿಸದೆ ಸಿದ್ದರಾಮಯ್ಯ ಅವರು ಬೃಹತ್ ಪ್ರಚಾರ ನಡೆಸಿದರು. ಸಾವಿರಾರು ಕಾರ್ಯಕರ್ತರು ಈ ಸಂದರ್ಭದಲ್ಲಿದ್ದರು. ಪಕ್ಷದ ಪರ ಘೋಷಣೆ ಕೂಗುತ್ತಿರುವುದು ಕಂಡು ಬಂತು.

ಇದೇ ಸಂದರ್ಭದಲ್ಲಿ ಹಲವಾರು ಜೆಡಿಎಸ್, ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ