![IMG-20180506-WA0063](http://kannada.vartamitra.com/wp-content/uploads/2018/05/IMG-20180506-WA0063-381x381.jpg)
ಬೀದರ, ಮೇ. 5- ರಾಜ್ಯದಲ್ಲಿ ಸುಭದ್ರ ಸರ್ಕಾರ ಹಾಗೂ ಭ್ರಷ್ಟಾಚಾರ ರಹಿತ ಆಡಳಿತ ನಡೆಸಲು ಸಂಕಲ್ಪ ಮಾಡಿದ್ದು, ಕಾಂಗ್ರೆಸ್ ಪಕ್ಷವನ್ನು ದೂರವಿಟ್ಟು ಬಿಜೆಪಿಗೆ ಬೆಂಬಲಿಸಬೇಕು ಎಂದು ಬಿಜೆಪಿ ಅಭ್ಯರ್ಥಿ ಸೂರ್ಯಕಾಂತ ನಾಗಮಾರಪಳ್ಳಿ ಕರೆ ನೀಡಿದರು.
ತಾಲೂಕಿನ ಗಾದಗಿ ಗ್ರಾಮದಲ್ಲಿ ಪ್ರಚಾರ ನಡೆಸಿ ಮಾತನಾಡಿದ ಸೂರ್ಯಕಾಂತ ನಾಗಮಾರಪಳ್ಳಿ ಅವರು, ಜಾತಿ, ಧರ್ಮದ ಹೆಸರಿನ ಮೇಲೆ ರಾಜಕಾರಣ ಮಾಡುವ ಕಾಂಗ್ರೆಸ್ ಜನರ ಮಧ್ಯೆ ಒಡೆದಾಳುವ ನೀತಿ ಅನುಸರಿಸುತ್ತಿದೆ. ಇಲ್ಲಿನ ಕಾಂಗ್ರೆಸ್ ಅಭ್ಯರ್ಥಿ ರಹೀಮಖಾನ್ ಸಹ ಧರ್ಮ ರಾಜಕಾರಣ ಮಾಡುತ್ತಿದ್ದು, ನನಗೆ ಒಂದೇ ಸಮುದಾಯದ ಮತ ಬೇಕು ಎನ್ನುವ ರೀತಿ ಮತನಾಡುತ್ತಿದ್ದಾರೆ.
ಇವರಿಗೆ ತಕ್ಕ ಪಾಠ ಕಲಿಸಬೇಕು ಎಂದು ಹೇಳಿದರು.
ಮೇ 9ರಂದು ಬೀದರ್ ನಗರಕ್ಕೆ ಪ್ರಧಾನಿ ನರೇಂದ್ರ ಮೋದಿ ಬರುತ್ತಿದ್ದು, ಕಾಂಗ್ರೆಸ್ ಸೇರಿ ವಿಪಕ್ಷಗಳಿಗೆ ನಡುಕ ಶುರುವಾಗಿದೆ. ನಮ್ಮ ಸೋಲು ಗ್ಯಾರಂಟಿ ಎಂದು ಎರಡು ಪಕ್ಷಗಳಿಗೆ ತಿಳಿದಿದೆ. ಈ ಬಾರಿ ಬಿಜೆಪಿ ಅತ್ಯಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮೇ 12ರಂದು ಎಲ್ಲರು ತಪ್ಪದೇ ಮತದಾನ ಮಾಡುವ ಮೂಲಕ ಬಿಜೆಪಿಗೆ ಭರ್ಜರಿ ಬಹುಮತದೊಂದಿಗೆ ಗೆಲ್ಲಿಸಬೇಕು. ನೀವು ಮತದಾನ ಮಾಡುವ ಜೊತೆಯಲ್ಲಿ ನಿಮ್ಮವರಿಗೂ ಕೇಂದ್ರಕ್ಕೆ ಕರೆದುಕೊಂಡು ಮತದಾನದಲ್ಲಿ ಪಾಲ್ಗೊಳ್ಳುವಂತೆ ನೋಡಿಕೊಳ್ಳಬೇಕು ಎಂದು ಮನವಿ ಮಾಡಿದರು.