
ಮೈಸೂರು :ಮೇ-7: ನಟ ದರ್ಶನ್ ಪ್ರಚಾರ ನಡೆಸಿದ ಬಳಿಕ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡಿವೆ ಗಲಾಟೆ, ಮಾರಾಮಾರಿ ನಡೆದು ಘಟನೆಯಲ್ಲಿ 15 ಜನ ಕಾಂಗ್ರೆಸ್ ಕಾರ್ಯಕರ್ತರು ಗಾಯಗೊಂಡಿದ್ದ ಹಿನ್ನಲೆಯಲ್ಲಿ ಅವರನ್ನು ಕೆ ಆರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ನಿಟ್ಟಿನಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳನ್ನು ವಿಚಾರಿಸಿದರು.
ನಾಗನಹಳ್ಳಿಯಲ್ಲಿ ದರ್ಶನ್ ಸಿಎಂ ಸಿದ್ದರಾಮಯ್ಯ ಪರ ಚುನಾವಣಾ ಪ್ರಚಾರಕ್ಕೆ ಬಂದಿದ್ದ ವೇಳೆ ದರ್ಶನ ಪ್ರಚಾರಕ್ಕೆ ವಿರೋಧ ವ್ಯಕ್ತಪಡಿಸಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಜೆಡಿಎಸ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನೆಗೆ ಮುಂದಾಗಿದ್ದ ವೇಳೆ ಎರಡು ಪಕ್ಷಗಳ ಕಾರ್ಯಕರತರ ನಡುವೆ ಮಾರಾಮಾರಿ ನಡೆದಿತ್ತು.
ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರಿಂದ ಪರಸ್ಪರ ದೂರು ದಾಖಲಿಸಿದ್ದರು.
ಇಂದು ಕೆ.ಆರ್ ಆಸ್ಪತ್ರೆಗೆ ಭೇಟಿ ನೀಡಿದ ಸಿದ್ದರಾಮಯ್ಯ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.