ದಾಖಲೆಯಿಲ್ಲದೆ ಬಸ್ಸಿನಲ್ಲಿ ಸಾಗಿಸುತ್ತಿದ್ದ 3 ಕೋಟಿ ಹಣ ವಶ !

ತುಮಕೂರು,ಮೇ 7

ದಾಖಲೆ ಇಲ್ಲದೆ ಬಸ್ಸಿನಲ್ಲಿ ಸಾಗಿಸುತ್ತಿದ್ದ 3 ಕೋಟಿಗೂ ಅಧಿಕ ಹಣವನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ತುಮಕೂರು ಜಿಲ್ಲೆಯ ಕ್ಯಾತ್ಸಂದ್ರದಲ್ಲಿ ಸೋಮವಾರ ಮುಂಜಾನೆ ನಡೆದಿದೆ.

ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಬಸ್ಸಿನಲ್ಲಿ ಅಕ್ರಮವಾಗಿ ಹಣ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಕ್ಯಾತ್ಸಂದ್ರ  ಪೊಲೀಸರು ಸೋಮವಾರ ಮುಂಜಾನೆ 1.30ರ ವೇಳೆಗೆ  ಕಾರ್ಯಾಚರಣೆ ನಡೆಸಿದ್ದು ಸುಮಾರು 3 ಕೋಟಿ. ರೂಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆದರೆ ಈ ಹಣ ಯಾರಿಗೆ ಸೇರಿದ್ದು ಎಂಬ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ