ಆ್ಯಂಬುಲೆನ್ಸ್‍ನಲ್ಲಿ ಸೀರೆ!

ಬೆಳಗಾವಿ, ಮೇ 7-ಚುನಾವಣಾ ಆಯೋಗ ಚಾಪೆ ಕೆಳಗೆ ನುಸುಳಿದರೆ ರಾಜಕೀಯ ಪಕ್ಷಗಳು ರಂಗೋಲಿ ಕೆಳಗೆ ನುಸುಳುತ್ತಿವೆ ಎಂಬುದನ್ನು ಪುಷ್ಟೀಕರಿಸುವ ಪ್ರಕರಣವೊಂದು ಗರಗ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮತದಾರರಿಗೆ ಸೀರೆ ಹಂಚಲು ರಾಜಕೀಯ ಪಕ್ಷವೊಂದು ಆ್ಯಂಬುಲೆನ್ಸ್ ಬಳಸಿಕೊಂಡಿರುವುದು ತಿಳಿದು ಬಂದಿದೆ. ಬೆಳಗಾವಿಯಿಂದ ಹಾವೇರಿಗೆ ಹೋಗುತ್ತಿದ್ದ ಆ್ಯಂಬುಲೆನ್ಸ್‍ನಲ್ಲಿ ಮತದಾರರಿಗೆ ಹಂಚಲು ಸೀರೆಗಳನ್ನು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪೆÇಲೀಸರು ಜಪ್ತಿ ಮಾಡಿ 1800 ಸೀರೆಗಳನ್ನು ವಶಪಡಿಸಿಕೊಂಡಿದ್ದಾರೆ.
ಆ್ಯಂಬುಲೆನ್ಸ್‍ನಲ್ಲಿ ಸೀರೆ ಸಾಗಿಸುತ್ತಿದ್ದ ನಾಲ್ವರನ್ನು ಬಂಧಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಲಾಗುತ್ತಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ