ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟ: ಶೇ 71.93 ವಿದ್ಯಾರ್ಥಿಗಳು ಪಾಸ್, ಉಡುಪಿ ಪ್ರಥಮ, ಈ ಬಾರಿಯೂ ಬಾಲಕಿಯರೇ ಮೇಲುಗೈ

ಬೆಂಗಳೂರು,ಏ.7

ಕಳೆದ ಮಾರ್ಚ್-ಏಪ್ರಿಲ್ ನಲ್ಲಿ ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ.

ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜಿನೀಶ್ ಫಲಿತಾಂಶ ಪ್ರಕಟ ಮಾಡಿದ್ದು, 71.93 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಕಳೆದ ಬಾರಿಗಿಂತ ಈ ಬಾರಿ ಶೇ.4ರಷ್ಟು ಹೆಚ್ಚಳವಾಗಿದೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಉಡುಪಿ ಪ್ರಥಮ ಸ್ಥಾನವಾಗಿದ್ದು, ಉತ್ತರ ಕನ್ನಡ ದ್ವಿತೀಯ, ಚಿಕ್ಕೋಡಿ ತೃತೀಯ ಹಾಗೂ ಯಾದಗಿರಿ ಮೂರನೇ ಸ್ಥಾನ ಗಳಿಸಿವೆ ಎಂದು ಅವರು ಹೇಳಿದ್ರು.

ಮಧ್ಯಾಹ್ನ 1 ಗಂಟೆಯ ನಂತರ ಎಸ್ಎಸ್ಎಲ್ ಸಿ ಬೋರ್ಡ್ ವೆಬ್ ಸೈಟ್ ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಮೇ 8 ರಂದು ಎಲ್ಲಾ ಶಾಲೆಗಳಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ.

ಈ ಬಾರಿ ಸುಮಾರು 8 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಫಲಿತಾಂಶ ಲಭ್ಯವಾಗೋ ವೆಬ್ ಸೈಟ್ ಈ ಕೆಳಗಿನಂತಿದೆ.

http://sslc.kar.nic.in

http://karresults.nic.in

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ