ಎಸ್‍ಯುಸಿಐನಿಂದ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಕಣಕ್ಕೆ

ಬೆಂಗಳೂರು, ಮೇ 7- ಸೋಷಯಲಿಸ್ಟ್ ಯುನಿಟ್ ಸೆಂಟರ್ ಆಫ್ ಇಂಡಿಯಾ ವತಿಯಿಂದ ಮುಂಬರುವ ವಿಧಾನಸಭಾ ಚುನಾವಣೆಗೆ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ ಎಂದು ಎಸ್‍ಯುಸಿಐ ರಾಜ್ಯ ಸಮಿತಿ ಸದಸ್ಯ ಎಂ.ಎನ್.ಶ್ರೀರಾಮ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗುಲ್ಬರ್ಗ ಗ್ರಾಮೀಣ ವಿಧಾನಸಭಾ ಕ್ಷೇತ್ರದಿಂದ ಸೋಮಶೇಖರ್, ಯಾದಗಿರಿ, ಸಂಡೂರು ವಿಧಾನಸಭಾ ಕ್ಷೇತ್ರದಿಂದ ರಾಮಾಂಜಿನಪ್ಪ ಹಾಲ್ದಳ್ಳಿ, ರಾಜರಾಜೇಶ್ವರಿ ನಗರ ಕ್ಷೇತ್ರದಿಂದ ಎಚ್.ಪಿ.ಶಿವಪ್ರಕಾಶ್, ಗೋವಿಂದರಾಜನಗರ ಕ್ಷೇತ್ರದಿಂದ ಡಾ.ಕೆ.ಎಸ್.ಗಂಗಾಧರ್ ಅವರನ್ನು ಕಣಕ್ಕಿಳಿಸಲಾಗಿದೆ ಎಂದು ತಿಳಿಸಿದರು.
ರಾಜ್ಯದ ಜನರು ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳಿಗೆ ಅಧಿಕಾರ ಕೊಟ್ಟು ನೋಡಿದ್ದಾರೆ. ಆದರೆ, ಈ ಮೂರು ಪಕ್ಷಗಳು ಜನ ನಿರೀಕ್ಷಿಸಿದಷ್ಟು ಅಭಿವೃದ್ಧಿಯಾಗಿಲ್ಲ. ಹಾಗಾಗಿ ಈ ಮೂರು ಪಕ್ಷಗಳನ್ನು ತಿರಸ್ಕರಿಸಿ ಎಸ್‍ಯುಸಿಐನ ಅಭ್ಯರ್ಥಿಗಳನ್ನು ಬೆಂಬಲಿಸಬೇಕೆಂದು ಮನವಿ ಮಾಡಿದರು.

ನಮ್ಮ ಅಭ್ಯರ್ಥಿಗಳು ಗೆದ್ದರೆ ಗುತ್ತಿಗೆ ಪದ್ದತಿಯನ್ನು ರದ್ದುಪಡಿಸಿ ಎಲ್ಲ ಕಾರ್ಮಿಕರನ್ನು ಖಾಯಣಗೊಳಿಸಲಾಗುವುದು ಎಂದು ಹೇಳಿದರು.
ಖಾಸಗಿ ವಲಯದಲ್ಲಿ ಹೆಚ್ಚು ಉದ್ಯೋಗ ಸೃಷ್ಟಿಸುವ ಉದ್ಯಮಗಳಿಗೆ ಮಾತ್ರ ಉತ್ತೇಜನ ನೀಡಲಾಗುವುದು ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾರ್ಯದರ್ಶಿ ಜ್ಞಾನಮೂರ್ತಿ, ಸದಸ್ಯರಾದ ಶೋಭಾ, ವಿ.ಎನ್.ರಾಜಶೇಖರ್ ಉಪಸ್ಥಿತರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ