ನವದೆಹಲಿ,ಮೇ7- ದೇಶದ ಉತ್ತರ ಈಶಾನ್ಯ ಹಾಗೂ ದಕ್ಷಿಣ ಭಾರತದಲ್ಲಿ ಚಂಡ ಮಾರುತ ಅಪ್ಪಳಿಸಿ ಭಾರೀ ಅವಾಂತರ ಸೃಷ್ಟಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕರ್ನಾಕ ಸೇರಿದಂತೆ ಉತ್ತರಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ, ಸಿಕ್ಕಿಂ, ಒಡಿಶಾ, ಅಸ್ಸಾಂ , ಮೇಘಾಲಯ, ಮಣಿಪುರ, ಮಿಜೋರಾಂ, ತ್ರಿಪುರ, ಕೇರಳ, ಆಂಧ್ರಪ್ರದೇಶದ ಕಡಲ ತೀರಗಳಿಗೆ ಈ ವಿನಾಶಕಾರಿ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದ್ದು , ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹೇಳಲಾಗಿದೆ.
ಇದರ ಜೊತೆಗೆ ರಾಷ್ಟ್ರ ರಾಜಧಾನಿ ದೆಹಲಿ, ರಾಜಸ್ಥಾನದಲ್ಲೂ ಭಾರೀ ಮಳೆಯಾಗಲಿದ್ದು , ತುರ್ತು ಕ್ರಮ ಕೈಗೊಳ್ಳುವಂತೆ ವಿಕೋಪ ನಿರ್ವಹಣಾ ಪರಿಹಾರ ಸಂಸ್ಥೆಗಳಿಗೆ ಕೇಂದ್ರ ಗೃಹಸಚಿವಾಲಯ ಮುನ್ನೆಚ್ಚರಿಕೆ ಸಂದೇಶ ರವಾನಿಸಿದೆ.
ಹರಿಯಾಣದಲ್ಲಿ ಶೀತಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಶಾಲಾ ಕಾಲೇಜುಗಳಿಗೆ ಎರಡು ದಿನ ರಜೆ ಘೋಷಿಸಲಾಗಿದೆ ಮತ್ತು ಕೇಂದ್ರ ಆಡಳಿತ ಪ್ರದೇಶಗಳಲ್ಲೂ ಕಟ್ಟೆಚ್ಚರದಲ್ಲಿರುವಂತೆ ಹಾಗೂ ಯಾವುದೇ ಪರಿಸ್ಥಿತಿ ನಿಭಾಯಿಸಲು ಸನ್ನದ್ಧರಾಗಿರುವಂತೆ ಆದೇಶಿಸಲಾಗಿದೆ.