
ಬೀದರ್ ಮೇ 7- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಐದು ವರ್ಷದಲ್ಲಿ ಸ್ವಚ್ಛ, ಶುದ್ಧ, ಸುಭದ್ರ ಆಡಳಿತ ನೀಡಿದ್ದರಿಂದ ಜನತೆ ಮತ್ತೊಮ್ಮೆ ರಾಜ್ಯದಲ್ಲಿ ಕಾಂಗ್ರೆಸ್ಗೆ ಸ್ಪಷ್ಟ ಬಹುಮತ ನೀಡಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ವಿಜಯಸಿಂಗ್ ವಿಶ್ವಾಸ ವ್ಯಕ್ತಪಡಿಸಿದರು.
ಔರಾದ್ನ ವಿವಿಧೆಡೆ ಕಾಂಗ್ರೆಸ್ ಅಭ್ಯರ್ಥಿ ವಿಜಯಕುಮಾರ ಕೌಡಾಳ್ ಪರ ಪ್ರಚಾರ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಸೇರಿ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ. 2.19 ಲಕ್ಷ ಕೋಟಿ ರೂ. ಬಜೆಟ್ ಮಂಡಿಸುವ ಮೂಲಕ ರಾಜ್ಯದ ಇತಿಹಾಸದಲ್ಲೇ ಹೊಸ ಮೈಲಿಗಲ್ಲು ಸ್ಥಾಪನೆ ಮಾಡಿದೆ. ಸರ್ವೆ ಜನಃ ಸುಖಿನೋ ಭವಂತು ಎಂಬ ವಾಕ್ಯದೊಂದಿಗೆ ರಾಜ್ಯದ ಎಲ್ಲ ಜನರ ಅಭಿವೃದ್ಧಿಗೆ ಶ್ರಮಿಸಿದೆ ಎಂದರು.
ನಾನೇ ಸಿಎಂ ಆಗುವೆ ಎಂದು ಯಡಿಯೂರಪ್ಪ ಅವರು ಹಗಲು ಕನಸು ಕಾಣುತ್ತಿದ್ದಾರೆ. ಜೆಡಿಎಸ್ ಆಟಕ್ಕುಂಟು ಲೆಕ್ಕಕ್ಕಿಲ್ಲ. ಔರಾದ್ನಲ್ಲಿ ಕಾಂಗ್ರೆಸ್ ಪರ ವಾತಾವರಣ ಇದೆ. ಬಿಜೆಪಿ ಶಾಸಕರ ದಬ್ಬಾಳಿಕೆಯಿಂದ ಜನ ಬೇಸೆತ್ತು ಹೋಗಿದ್ದಾರೆ. ಹೀಗಾಗಿ ಔರಾದ್ನಲ್ಲಿ ಈ ಬಾರಿ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್ ಅಭ್ಯರ್ಥಿ ವಿಜಯಕುಮಾರ ಪಾಟೀಲ್ ಮಾತನಾಡಿದರು.